ಜಿಲ್ಲಾ ಸುದ್ದಿ

ಪ್ರಧಾನಿಯಿಂದ ಮಾತ್ರ ಸಾಧ್ಯ

ಪ್ರಧಾನಿಯಿಂದ ಮಾತ್ರ ಸಾಧ್ಯ
ಸಿದ್ದರಾಮಯ್ಯ
Published On :
ಬೆಂಗಳೂರು: ಮಹದಾಯಿ ಸಮಸ್ಯೆ ಪರಿಹಾರಕ್ಕೆ ಪ್ರಧಾನಿಯೊಬ್ಬರೇ ದಾರಿ. ಮೂರು ರಾಜ್ಯಗಳ ಸಭೆ ಕರೆದು ಅವರೇ ಸಮಸ್ಯೆಗೆ ಪರಿಹಾರ ನೀಡಲಿ. ಯಾವುದೇ ನಿಯೋಗ ಹೋಗುವುದರಿಂದ ಪ್ರಯೋಜನವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೋವಾ ಅಥವಾ ಮಹಾರಾಷ್ಟ್ರಕ್ಕೆ ನಿಯೋಗ ಹೋಗಿ ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದರಿಂದಾಗಲಿ ಅಥವಾ ಬಿಜೆಪಿ ಮುಖಂಡರಆಶಯದಂತೆ ಸೋನಿಯಾ ಗಾಂಧಿ ಯವರಲ್ಲಿ ನಿಯೋಗ ಕೊಂಡೊಯ್ಯುವುದು ಆಗುಹೋಗದ ವಿಚಾರ.ಪ್ರಧಾನಿಗಳಲ್ಲಿ ಮಾತ್ರ ಈ ಸಮಸ್ಯೆಗೆ ಪರಿಹಾರವಿದೆ ಎಂದು ಸ್ಪಷ್ಟಪಡಿಸಿದರು. ಕಳಸಾ ಬಂಡೂರಿ ವಿಚಾರದಲ್ಲಿ ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿಯಿಂದ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ. ಇದು ಗೊತ್ತಿದ್ದರೂ ಬಿಜೆಪಿಯವರು ರಾಜಕೀಯ ಮಾಡು ತ್ತಿದ್ದಾರೆ. ಪ್ರಧಾನಿಯವರನ್ನು ಒಪ್ಪಿಸ ಲಾಗದೇ ಇಲ್ಲಿಗೆ ಬಂದು ಏನೇನೋ ಮಾಡುತ್ತಿದ್ದಾರೆ. ಸರ್ವ ಪಕ್ಷ ನಿಯೋಗದ ವೇಳೆ ಪ್ರಧಾನಿಯವರು ಹೇಳಿಕೆ ನೋಡಿದರೆ ಏನೆಂದು ಹೇಳಬೇಕೋ ಅರ್ಥವಾಗುತ್ತಿಲ್ಲ ಎಂದು ನಕ್ಕರು.
ಕಳಸಾ ಬಂಡೂರಿಗೆ ಅನುಮತಿ ಕೊಟ್ಟಿದ್ದ ಕೇಂದ್ರ, ನಂತರ ತಡೆ ತಂದಿದ್ದುಅಂದಿನ ಪ್ರಧಾನಿ ವಾಜಪೇಯಿಯವರಲ್ಲವೇ? ಈಗ ಇವೆಲ್ಲಾ ಹೇಳಿದರೆ ಏನೇನೋ ಅರ್ಥ ಕಲ್ಪಿಸಲಾಗುತ್ತದೆ.
ರಾಜಕೀಯ ಮಾಡಬಾರದೆಂದು ಸುಮ್ಮನಿದ್ದೇವೆ ಎಂದರು. ಬಿಜೆಪಿಯವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು. ರೈತರ ಸಾಲ ಮನ್ನಾ ಮಾಡಬೇಕೆಂಬ
ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಪ್ರಧಾನಿ ಮೇಲೆ ಒತ್ತಡ ಹೇರಿ ಸಮಸ್ಯೆ ಬಗೆಹರಿಸಲಿ. ಹಾಗೆಯೇ ರಾಷ್ಟ್ರೀಕೃತ ಬ್ಯಾಂಕುಗಳ ರೈತರ ಸಾಲಗಳನ್ನು ಮನ್ನಾ
ಮಾಡಿಸಲಿ. ಶೇ.75ರಷ್ಟು ರೈತ ಸಾಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲೇ ಇದೆ ಎಂದರು. ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ಸರ್ಕಾರ ಮುಕ್ತ ಮನಸು ಹೊಂದಿದೆ. ಈ ಬಗ್ಗೆ ನಡೆಯುತ್ತಿರುವ ಚರ್ಚೆ ಸ್ವಾಗತಾರ್ಹ. ಸರ್ಕಾರ ಎಲ್ಲವನ್ನೂ ಪರಿಶೀಲಿಸಿ ಹೆಜ್ಜೆ ಇಡಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.