
ಬೆಂಗಳೂರು: ಬಾಲಕ ಪ್ರಕಾಶ್ ರಾಜಕಾಲುವೆಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯತಾ ಟೆಕ್ ಪಾರ್ಕ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ವಾರ್ತಾ ಸಚಿವ ರೋಷನ್ ಬೇಗ್ ಹೇಳಿದ್ದಾರೆ.
ಬಾಲಕ ಪ್ರಕಾಶ್ ರಾಜಕಾಲುವೆಗೆ ಬಲಿಯಾಗಿರುವ ಸ್ಥಳದಲ್ಲಿ ಮಾನ್ಯತಾ ಟೆಕ್ ಪಾರ್ಕ್ ಸಂಸ್ಥೆಯವರು ರಾಜಕಾಲುವೆಯನ್ನು ಒತ್ತುವರಿ ಮಾಡಿದ್ದಾರೆ. ಅಲ್ಲಿ ಪೈಪ್‍ಗಳನ್ನು ಜೋಡಿಸಿ ಮಳೆ ನೀರು ಸರಾಗವಾಗಿ ಹರಿಯದಂತೆ ಮಾಡಿದ್ದಾರೆ. ಹೀಗಾಗಿ ಸಂಸ್ಥೆ ವಿರುದಟಛಿ ಕ್ರಿಮಿನಲ್ ಕೇಸು ದಾಖಲಿಸುವಂತೆ ಸೂಚಿಸಲಾಗಿದೆ ಎಂದರು. ವಸಂತನಗರದಲ್ಲಿ ಗುರುವಾರ ಏರ್ಪಡಿಸಿದ್ದ ಬಿಬಿಎಂಪಿಯ ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಮೃತ ಬಾಲಕನ ಕುಟುಂಬಕ್ಕೆ ಮಾನ್ಯತಾ ಟೆಕ್ ಪಾರ್ಕ್ ಸಂಸ್ಥೆಯಿಂದಲೇ ಪರಿಹಾರ ದೊರಕಿಸುವಂತೆ ಸೂಚಿಸಲಾಗಿದ್ದು, ಜತೆಗೆ ಬಿಬಿಎಂಪಿಯಿಂದಲೂ ಪರಿಹಾರ ದೊರೆಯುವಂತೆ ಮಾಡಲಾಗುತ್ತಿದೆ. ಹಾಗೆಯೇ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ತೀವ್ರಗೊಳಿಸಬೇಕೆಂದೂ ಸೂಚಿಸಲಾಗಿದೆ. ನಗರದ ಚರಂಡಿಗಳು ತೆರೆದುಕೊಂಡಿದ್ದು, ತೊಂದರೆಯಾಗುತ್ತಿದ್ದರೆ, ಅವುಗಳನ್ನು ದುರಸ್ತಿ ಮಾಡಿ ಪಾದಚಾರಿಗಳಿಗೆ ಅನುಕೂಲ ಮಾಡುವಂತೆ ಹೇಳಲಾಗುವುದು ಎಂದು ರೋಷನ್ ಬೇಗ್ ವಿವರಿಸಿದರು.
ಇದಕ್ಕೂ ಮುನ್ನ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಶಿವಾಜಿನಗರ ಕ್ಷೇತ್ರ ವ್ಯಾಪ್ತಿಯ ಮೌಂಟ್ ಕಾರ್ಮೆಲ್ ಕಾಲೇಜಿನಿಂದ ದಂಡು ಪ್ರದೇಶದವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಶೀಘ್ರವೇ ದುರಸ್ತಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಮಾತನಾಡಿ, ಸರ್ಕಾರ ಟೆಂಡರ್ ಶ್ಯೂರ್
ಯೋಜನೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಲಾಗುವುದು ಎಂದರು.
Advertisement