ಪ್ರತ್ಯೇಕ ಅಪಘಾತ: ಇಬ್ಬರ ದುರ್ಮರಣ

ಅಗರ ಹಾಗೂ ಹೊರಮಾವು ಸಮೀಪದ ಚೈತನ್ಯ ಲೇಔಟ್‍ನಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ಅಗರ ಹಾಗೂ ಹೊರಮಾವು ಸಮೀಪದ ಚೈತನ್ಯ ಲೇಔಟ್‍ನಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶ ಮೂಲದ ಸುಕುಮಾರ್ (28) ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬೈಕ್ ನಲ್ಲಿ ಕಚೇರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬೆಳ್ಳಂದೂರಿನ ಸಾಫ್ಟ್ ವೇರ್ ಕಂಪನಿ ಉದ್ಯೋಗಿ ಸುಕುಮಾರ್, ಸರ್ಜಾಪುರ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದರು. ಅಗರ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೆಲ್ಮೆಟ್ ಧರಿಸದೆ ಇದ್ದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಲೆಕ್ಟ್ರೀಷಿಯನ್ ಸಾವು: ಚೈತನ್ಯ ಲೇ ಔಟ್ ನ ಒಂದನ್ ಅಡ್ಡ ರಸ್ತೆಯಲ್ಲಿ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ಎಲೆಕ್ಟ್ರೀಷಿಯನ್ ಗೋಪಾಲ್ (20) ಮೃತಪಟ್ಟಿದ್ದಾರೆ. ಆಂಧ್ರಪ್ರದೇಶ ಮೂಲದ ಗೋಪಾಲ್, ಸ್ನೇಹಿತ ಲಕ್ಷ್ಮಣ್ ಜತೆ ಹೊರಮಾವು ಬಳಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ 9.30ರ ಸುಮಾರಿಗೆ ಜಯಂತಿನಗರಕ್ಕೆ ತೆರಳುತ್ತಿದ್ದ ಅವರು, ಹಂಪ್ಸ್ ಕಂಡು ದಿಢೀರ್ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿ ಬೈಕ್ ಕೆಳಗೆ ಬಿದ್ದಿದೆ. ಇಬ್ಬರಿಗೂ ಗಂಭೀರ ಗಾಯಗಳಾಗಿದ್ದವು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಗೋಪಾಲ್ ಕೊನೆಯುಸಿರೆಳೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com