ಇನ್ನುಳಿದ ಶೇ.30ರಷ್ಟು ನಿವೇಶನಗಳನ್ನು ಹರಾಜಿನ ಮೂಲಕ ಸಾರ್ವಜನಿಕರಿಗೆ ಮಾರಾಟ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ ಮಾಡಿದವರಿಗೆ ಶೇ.10, ಕಲೆ, ಚಿತ್ರಕಲೆ, ಶಿಲ್ಪಕಲೆ ಸಂಗೀತ, ವಿಜ್ಞಾನ, ಸಾಹಿತ್ಯ, ಶಿಕ್ಷಣ, ವೈದ್ಯಕೀಯ, ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಶೇ.15, ನಿವೃತ್ತ ಯೋಧರಿಗೆ ಶೇ.5, ಬೆಂಗಳೂರು ಮಹಾನಗರ ವ್ಯಾಪ್ತಿಯ ಸ್ವಾತಂತ್ರ್ಯ ಯೋಧರಿಗೆ ಶೇ.5, ಸೇವೆಯಲ್ಲಿ ಮೃತಪಟ್ಟ ರಾಜ್ಯ ಸರ್ಕಾರಿ ನೌಕರರ ಕುಟುಂಬಕ್ಕೆ ಶೇ.5ರಷ್ಟು ನಿವೇಶನಗಳನ್ನು ನೀಡುವುದಕ್ಕೆ ತೀರ್ಮಾನಿಸಲಾಗಿದೆ.