ಚಲಿಸುವ ವಾಹನದಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಗ್ಯಾಂಗ್‌ರೇಪ್

ಬೆಂಗಳೂರಿನಲ್ಲಿ ಬಿಪಿಒ ಉದ್ಯೋಗಿ ಮೇಲೆ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಾಸುವ ಮುನ್ನವೇ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ತುಮಕೂರು: ಬೆಂಗಳೂರಿನಲ್ಲಿ ಬಿಪಿಒ ಉದ್ಯೋಗಿ ಮೇಲೆ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಾಸುವ ಮುನ್ನವೇ ತುಮಕೂರಿನಲ್ಲಿ 28 ವರ್ಷದ ಮಹಿಳೆ ಮೇಲೆ ಚಲಿಸುವ ಟಾಟಾ ಸುಮೋದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ರಾತ್ರಿ 8 ಗಂಟೆಯ ಸುಮಾರಿಗೆ ತುಮಕೂರಿನ ಟೌನ್ ಹಾಲ್ ಸರ್ಕಲ್‌ನಲ್ಲಿ ಮಹಿಳೆಯನ್ನು ಹತ್ತಿಸಿಕೊಂಡ ಐವರು ಕಾಮುಕರು, ಚಲಿಸುವ ವಾಹನದಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಬಳಿಕ ದಾಬಸ್‌ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊರಟಗೆರೆ ಮೂಲದ ಮಹಿಳೆ ಪತಿಯಿಂದ ಪ್ರತ್ಯೇಕವಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸದ್ಯ ಮಹಿಳೆ ತುಮಕೂರಿನ ಆಸ್ಪತ್ರೆಯೊಂದರಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಆಸ್ಪತ್ರೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು, ಕಾಮುಕರ ಬಂಧನಕ್ಕೆ ಪೊಲೀಸ್ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಪೊಲೀಸರಿಗೆ ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸಲಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com