

ಬೀದರ್: ಬೀದರ್ ಜಿಲ್ಲೆಯ ಹುಮ್ನಾಬಾದ್ ಕಾಂಗ್ರೆಸ್ ಶಾಸಕ ರಾಜಶೇಖರ್ ಪಾಟೀಲ್ ಅವರ ಕಾರನ್ನೇ ಕದ್ದೊಯ್ದ ಘಟನೆ ಬುಧವಾರ ರಾತ್ರಿ ನಡೆದಿದೆ.
ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ 28 ಲಕ್ಷ ಮೌಲ್ಯದ ಟೊಯೋಟಾ ಪಾರ್ಚೂನರ್ ಕಾರನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ರಾಜಶೇಖರ್ ಪಾಟೀಲ್ ಅವರು ಹುಮ್ನಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ಬೆಂಗಳೂರಿನಿಂದ ಹುಮ್ನಾಬಾದ್ ಗೆ ಬಂದಿದ್ದ ಪಾಟೀಲ್ ಅವರು, ಕಾರನ್ನು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದರು.
ಮನೆಯ ಬಳಿಯಲ್ಲೇ ಪೊಲೀಸ್ ಠಾಣೆಯಿದ್ದರೂ ಶಾಸಕರಕಾರನ್ನು ಕದಿಯುವ ಮೂಲಕ ಕಳ್ಳರು ಪೊಲೀಸರಿಗೆ ಸವಾಲು ಹಾಕಿದ್ದಾರೆ.
Advertisement