ರಸ್ತೆ ಕಾಮಗಾರಿ ಪೂರ್ಣಕ್ಕೆ ಆಗ್ರಹ

ಪುರ: ಒಂದು ವರ್ಷದಿಂದ ನನೆಗುದ್ದಿಗೆ ಬಿದ್ದಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಮಂಗಲ ಗ್ರಾಮಸ್ಥರು...
ಪ್ರತಿಭಟನೆ(ಸಾಂದರ್ಭಿಕ ಚಿತ್ರ)
ಪ್ರತಿಭಟನೆ(ಸಾಂದರ್ಭಿಕ ಚಿತ್ರ)

ಕೆ.ಆರ್.ಪುರ: ಒಂದು ವರ್ಷದಿಂದ ನನೆಗುದ್ದಿಗೆ ಬಿದ್ದಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಮಂಗಲ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ಮಹದೇವಪುರ ಕ್ಷೇತ್ರದ ಕನ್ನಮಂಗಲ ಗ್ರಾಮದ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿ ಒಂದು ವರ್ಷದ ಹಿಂದೆ ಆರಂಭವಾಗಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಕೇವಲ ಮೆಟ್‍ಲಿಂಗ್ ಮಾತ್ರ ಮಾಡಲಾಗಿದ್ದು, ಉಳಿದ ಕಾಮಗಾರಿ ಹಾಗೆಯೇ ಇದೆ. ಜಲ್ಲಿಕಲ್ಲು ಹಾಗೂ ಧೂಳಿನಿಂದ ರಸ್ತೆ ತುಂಬಿದ್ದು ಸ್ಥಳೀಯರು ಅಸ್ತಮಾ ಹಾಗೂ ಶ್ವಾಸಕೋಶ ಇತರೆ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಜಲ್ಲಿ ಕಲ್ಲಿನಿಂದ ದ್ವಿಚಕ್ರ ವಾಹನ ಸವಾರರು ಸರಾಗವಾಗಿ ಚಲಿಸಲಾರದೆ, ಹಲವು ಬಾರಿ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಕನ್ನಮಂಗಲ ರಸ್ತೆ ಕಿರಿದಾಗಿದೆ ಹಾಗೂ ಬಹುಮಹಡಿ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಹೀಗಾಗಿ ರಸ್ತೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಗ್ರಾಮೀಣ ಭಾಗದ ರಸ್ತೆಯಾಗಿರುವುದರಿಂದ 2-3 ಇಲಾಖೆಗಳ ಅನುದಾನದಲ್ಲಿ ಅಭಿವೃದ್ಧಿಗೊಳಿಸುವ ಬದಲು ಕಾಮಗಾರಿಯ ಕ್ರಿಯಾಯೋಜನೆಗೆ ಪ್ರಸ್ತಾವನೆ ಸಲ್ಲಿಸಿ ಸುಮಾರು 2 ವರ್ಷ ಕಳೆದಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಅಬಿsವೃದಿಟಛಿಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿ ಪಾಲ್ ವಿಲ್ಸನ್, ಶೀಘ್ರದಲ್ಲಿ ಕಾಮಗಾರಿ ಮುಗಿಸುವುದಾಗಿ ಆಶ್ವಾಸನೆ ನೀಡಿದರು. ಮುಖಂಡರಾದ ರಘು, ಅನಿಲ್, ರಾಮಕೃಷ್ಣ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com