
ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಿಸಲು ವಕೀಲರಾದ ಸಿರಾಜಿನ್ ಬಾಷಾ ಮತ್ತು ಕೆ.ಎನ್ ಬಾಲರಾಜ್ ಅವರಿಗೆ ರಾಜ್ಯಪಾಲರು ನೀಡಿದ್ದ ಅನುಮತಿ ರದ್ದು ಕೊರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಬಿ.ಎಸ್.ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಎಸ್.ಕೆ ಮುಖರ್ಜಿ ಹಾಗೂ ನ್ಯಾ.ವಿನೀತ್ ಸರನ್ ಅವರಿದ್ದ ನ್ಯಾಯ ಪೀಠ ತೀರ್ಪು ಕಾಯ್ದಿರಿಸಿತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಚೇನಹಳ್ಳಿ ಸೇರಿದಂತೆ ನಗರದ ವಿವಿಧೆಡೆ ಬಿಡಿಎ ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೊಟಿಫಿಕೇಶನ್ ಮಾಡಿದ್ದ ಆರೋಪ ಸಂಬಂಧ ಪ್ರತ್ಯೇಕ ಐದು ಖಾಸಗಿ ದೂರು ದಾಖಲಿಸಲು ಸಿರಾಜಿನ್ ಬಾಷಾ ಮತ್ತು ಕೆ.ಎನ್ ಬಾಲರಾಜ್ ರಿಗೆ 2011 ರ ಜ.21 ರಂದು ಅಂದಿನ ರಾಜ್ಯಪಾಲರು ನೀಡಿದ್ದ ಅನುಮತಿ ರದ್ದುಗೊಳಿಸುವಂತೆ ಕೋರಿದ್ದರು.
Advertisement