ಅತ್ಯಾಚಾರಿಗೆ 10 ವರ್ಷ ಸೆರೆವಾಸ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗುರುವಾರ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ರು. 15,000 ದಂಡ ವಿಧಿಸಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗುರುವಾರ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ರು. 15,000 ದಂಡ ವಿಧಿಸಿದೆ.

ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಾರಕಬ್ಬಿನಹಳ್ಳಿ ಗ್ರಾಮದ ನಾಗಪ್ಪ ಸಿದ್ದಪ್ಪ ಬಾಬಾನಗರ ಶಿಕ್ಷೆಗೆ ಒಳಗಾದ ವ್ಯಕ್ತಿ. ಈತ ಕಳೆದ ವರ್ಷದ ಸೆ.9ರಂದು ಅಪ್ರಾಪ್ತ ಬಾಲಕಿಯನ್ನು  ಅಪಹರಿಸಿ ಬೇರೆ ರಾಜ್ಯಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಬಾಲಕಿಗೆ ಸರ್ಕಾರ ರು. 1 ಲಕ್ಷ ಪರಿಹಾರ ನೀಡಬೇಕು.  ಆಕೆಯ ಸಂಪೂರ್ಣ ಶೈಕ್ಷಣಿಕ ವೆಚ್ಚವನ್ನು ಭರಿಸಬೇಕು ಮತ್ತು ವಿದ್ಯಾಭ್ಯಾಸದ ಬಳಿಕ ನೌಕರಿ ನೀಡಬೇಕು ಎಂದು ನ್ಯಾಯಾಧೀಶರು ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com