ಲೋಕಾ ಹಗರಣ 4 ನೇ ಆರೋಪಪಟ್ಟಿ ಸಲ್ಲಿಕೆ

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಲೋಕೋಪಯೋಗಿ ಎಂಜಿನಿಯರ್ ಉದಯಶಂಕರ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಎಸ್.ಐ.ಟಿ4 ನೇ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಲೋಕಾಯುಕ್ತ
ಲೋಕಾಯುಕ್ತ
Updated on: 

ಬೆಂಗಳೂರು:ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಲೋಕೋಪಯೋಗಿ ಎಂಜಿನಿಯರ್ ಉದಯಶಂಕರ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ)4 ನೇ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಲೋಕಾಯುಕ್ತ ನ್ಯಾಯಮೂರ್ತಿ ವೈ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಮೊದಲ ಆರೋಪಿಯಾಗಿದ್ದಾರೆ. ಒಟ್ಟು ನಾಲ್ವರು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.
ಹಣ ನೀಡದೇ ಇದ್ದರೆ ನಿಮ್ಮ ಮನೆ, ಕಚೇರಿ ಮೇಲೆ ದಾಳಿ ನಡೆಸುವುದಾಗಿ ಆರೋಪಿಗಳು ಬೆದರಿಸಿದ್ದರು ಎಂದು ಆರೋಪಿಸಿ ಉದಯ ಶಂಕರ್ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಮೊದಲ ಆರೋಪಿ ಅಶ್ವಿನ್ ರಾವ್, 2 ನೇ ಆರೋಪಿ ಭಾಸ್ಕರ್ ಅಲಿಯಾಸ್ 420 ಭಾಸ್ಕರ್,  3 ನೇ ಆರೋಪಿ ನರಸಿಂಹ ಮೂರ್ತಿ, 4 ನೇ ಆರೋಪಿ ಹೊಟ್ಟೆಕೃಷ್ಣನನ್ನು ಹೆಸರಿಸಿದ್ದಾರೆ. ಈ ಪ್ರಕರಣದಲ್ಲಿ ದೂರವಾಣಿ ಕರೆ ಹಾಗೂ ಇತರೆ ಸಾಕ್ಷಿ ಸೇರಿ ಒಟ್ಟು 60 ಸಾಕ್ಷಿಗಳನ್ನು ಎಸ್ಐಟಿ ಕಲೆಹಾಕಿದೆ.
ಒಟ್ಟು 1038 ಪುಟದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಸದಸ್ಯ ಹಾಗೂ ಉದ್ಯಮಿ ಕೃಷ್ಣಮೂರ್ತಿ ಅವರು ಜಮೀನು ಮಾರಾಟ ಮಾಡಿ ಖಾತೆ ಮಾಡಿಸಿ ಕೊಡುವ ಸಂಬಂಧ ರೂ.10 ಲಕ್ಷ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಎಸ್ಐಟಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬುಧವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಮೂರನೇ ಆರೋಪಪಟ್ಟಿ ಸಲ್ಲಿಸದ್ದರು. ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಈಗಾಗಲೇ 3 ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಈ ವರೆಗೂ ಜಾಮೀನು ದೊರೆತಿಲ್ಲ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com