ರಾಘವೇಶ್ವರ ಜಾಮೀನು ರದ್ದು ಕೋರಿದ ಅರ್ಜಿ ವಿಚಾರಣೆ 29ಕ್ಕೆ

ಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಮಂಜೂರು ಮಾಡಿರುವ...
ರಾಘವೇಶ್ವರ ಭಾರತಿ
ರಾಘವೇಶ್ವರ ಭಾರತಿ
ಬೆಂಗಳೂರು: ಪ್ರೇಮಲತಾ ಮೇಲಿನ ಅತ್ಯಾಚಾರ  ಆರೋಪ ಪ್ರಕರಣ ಸಂಬಂಧ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಸಲ್ಲಿಸಿದ ಅರ್ಜಿ ಅರ್ಜಿ ವಿಚಾರಣೆಯನ್ನು 52ನೇ ಹೆಚ್ಚುವರಿ ಸೆಷನ್ ನ್ಯಾಯಾಲಯವು ಅ.29ಕ್ಕೆ ಮುಂದೂಡಿದೆ.
ನಿರೀಕ್ಷಣಾ ಜಾಮೀನು ಕುರಿತು ನ್ಯಾಯಾಲಯ ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡಿತ್ತು. ಪ್ರಕರಣವನ್ನು ಮಾ್ಯಜಿಸ್ಟ್ರೇಟ್ ನ್ಯಾಯಾಲಯದಿಂದ ವರ್ಗಾವಣೆ ಮಾಡಲಾಗಿದೆ. ಈ ಪ್ರಕ್ರಿಯೆ ಇನ್ನು ನಡೆಯುತ್ತಿದೆ. ಅದು ಮುಗಿದ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು. 
ಈ ನಡುವೆ ಸ್ವಾಮೀಜಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ರದ್ದು ಪಡಿಸುವಂತೆ ಸಿಐಡಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಾಮೀಜಿ ಪರ ವಕೀಲರು ಕಾಲಾವಕಾಶ ಕೋರಿದರು. ಆದ್ದರಿಂದ ನ್ಯಾಯಾಲಯ ಅ.29ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿತು. 
ಸಿಐಡಿ ಅರ್ಜಿ: ವೀರ್ಯ ಸೇರಿದಂತೆ ವಿವಿಧ ಮೂರು ವೈದ್ಯಕೀಯ ಪರೀಕ್ಷೆಗೆ ಸ್ವಾಮೀಜಿ ಗೈರಾಗಿದ್ದರು. ಹಾಗಾಗಿ ಇದು ನಿರೀಕ್ಷಣಾ ಜಾಮೀನಿನ ಷರತ್ತುಗಳ ಉಲ್ಲಂಘನೆ. ಆದ್ದರಿಂದ ಸ್ವಾಮೀಜಿ ಅವರಿಗೆ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನಿನನ್ನು ರದ್ದುಗೊಳಿಸಬೇಕು ಎಂದು ಸಿಐಡಿ ಅಧಿಕಾರಿಗಳು ಅ.6ರಂದು ಅರ್ಜಿ ಸಲ್ಲಿಸಿ, ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com