ಬಿಬಿಎಂಪಿ ವಿರುದ್ಧ ನಾಗರಿಕರ ಆಕ್ರೋಶ

ಸಾರ್ವಜನಿಕರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಬೃಹತ್ ಬೆಂಗಳೂರು ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿ ನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ‘ಬೆಂಗಳೂರಿನ ನಾಗರಿಕರಾದ ನಾವು’ ಸಂಘಟನೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ಸಾರ್ವಜನಿಕರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಬೃಹತ್ ಬೆಂಗಳೂರು ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿ ನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ‘ಬೆಂಗಳೂರಿನ ನಾಗರಿಕರಾದ ನಾವು’ ಸಂಘಟನೆ ನೇತೃತ್ವದಲ್ಲಿ ರಾಜಧಾನಿ ನಿವಾಸಿಗಳು ಶನಿವಾರ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.

ಗುಣಮಟ್ಟದ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಗಳಿಲ್ಲದೆ, ಬೆಂಗಳೂರಿನ ಜನತೆ ಕಲುಷಿತ ವಾತಾವರಣದಲ್ಲಿ ನರಳುತ್ತಿದ್ದಾರೆ. ನಗರದ ಸಮಸ್ಯೆಗಳನ್ನು ಅರಿತು ಮೂಲಸೌಲಭ್ಯ ಕಲ್ಪಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಇದರ ಪರಿಣಾಮವಾಗಿ ಜನರು ನಿತ್ಯ ನರಕಯಾತನೆಯಲ್ಲಿ ಬದುಕಬೇಕಾಗಿದೆ. ಗುಂಡಿ ಬಿದ್ದ ರಸ್ತೆಗಳಿಂದ ಅಪಘಾತಗಳು ಸಂಭವಿಸುತ್ತಿವೆ. ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದರೂ, ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿಲ್ಲ. ನೂತನ ತಂತ್ರಜ್ಞಾನವನ್ನು ನಗರದಲ್ಲಿ ಅಳವಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಕೈಗೊಂಡಿದ್ದ ವಿದೇಶ ಪ್ರವಾಸ ಸಫಲವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವು ಬಾರಿ ಮೂಲಸೌಕರ್ಯಕ್ಕಾಗಿ ಆಗ್ರಹಿಸಿದರೂ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹಾಗಾಗಿ ಸಮಸ್ಯೆಗಳು ಬಗೆಹರಿಯದೆ ಜೀವಂತವಾಗಿ ಉಳಿದಿವೆ. ಇನ್ನಾದರೂ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತು ಕೊಳ್ಳಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com