ಸರ್ಕಾರಿ ಅಧಿಕಾರಿಗಳಿಂದಲೇ ಮಾನವ ಹಕ್ಕು ಉಲ್ಲಂಘನೆ

ಸರ್ಕಾರ ಹಾಗೂ ಅಧಿಕಾರಿಗಳಿಂದಲೇ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿವೆ ಎಂದು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ ಅಸಮಾಧಾನ ವ್ಯಕ್ತಪಡಿಸಿದರು...
ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ (ಸಂಗ್ರಹ ಚಿತ್ರ)
ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ (ಸಂಗ್ರಹ ಚಿತ್ರ)

ಬೆಂಗಳೂರು: ಸರ್ಕಾರ ಹಾಗೂ ಅಧಿಕಾರಿಗಳಿಂದಲೇ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿವೆ ಎಂದು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಖಾಸಗಿ ಹೋಟೆಲ್ಧಿನಲ್ಲಿ ಶನಿವಾರ ಭಾರತೀಯ ಮಾನವ ಹಕ್ಕುಗಳ ಸಂರಕ್ಷಣಾ ವೇದಿಕೆ ಉದ್ಘಾಟಿಸಿ ಮಾತನಾಡಿದ ಅವರು, ಸಂಘಟನೆಗಳನ್ನು ಹುಟ್ಟು ಹಾಕುವುದೇ ದೊಡ್ಡ ಪುರುಷಾರ್ಥವಲ್ಲ. ಬಳಿಕ ಆ ಸಂಘಟನೆ ಹೇಗೆ ಕಾರ್ಯೋಖವಾಗುತ್ತದೆ ಎಂಬುದು ಮುಖ್ಯ. ಸಂವಿಧಾನದ ದೀಕ್ಷೆಯಾಗಿರುವ ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ದೇಶಕ್ಕೆ ಸ್ವಾತಂತ್ರ ಬಂದು 68 ವರ್ಷಗಳಾದರೂ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದ್ದು, ಹಕ್ಕುಗಳಿಂದ ವಂಚಿತವಾದ ದೊಡ್ಡ ಸಮೂಹವೇ ದೇಶದಲ್ಲಿದೆ. ಪ್ರಜಾಪ್ರಭುತ್ವ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ ಎಂದರೆ, ಪ್ರಜಾಪ್ರಭುತ್ವ ಇನ್ನೂ ಸರಿಯಾಗಿ ನೆಲೆಯೂರಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗಿ ನಡೆಯುತ್ತದೆ ಎಂಬುದು ಜನರ ಭಾವನೆಯಾಗಿದೆ. ಈ ಭಾವನೆ ನಿಜ ಕೂಡ. ಹಿಂದೆ ಅಪರಾಧ ಪ್ರಕರಣಗಳಲ್ಲಿ ಸತ್ಯ ಹೊರಗೆಡವಲು ಆರೋಪಿಗಳಿಗೆ ಹೊಡೆಯಲಾ ಗುತ್ತಿತ್ತು. ಆಗ ಬೇರೆ ಮಾರ್ಗಗಳೇ ಇರಲಿಲ್ಲ. ಆದರೆ ಈಗ ಇಲಾಖೆಯಲ್ಲಿ ಬದಲಾವಣೆ ತಂದಿದ್ದು, ಪೊಲೀಸ್ ತರಬೇತಿ ಕೇಂದ್ರಗಳು, ಕಾಲೇಜುಗಳಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮಾನವ ಹಕ್ಕುಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ.

ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವುದು ಪೊಲೀಸರ ಕರ್ತವ್ಯ. ಈ ವೇಳೆ ಶೇ.100ರಷ್ಟು ಪೊಲೀಸರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಹೇಳುವುದು ತಪ್ಪು. ಶುಕ್ರವಾರ ನಡೆದ ಎಸ್ ಐ ಜಗದೀಶ್ ಮರ್ಡರ್ ಪ್ರಕರಣವನ್ನು ಉದಾಹರಿಸಿದ ಅವರು, ಇಲ್ಲಿ ಪೊಲೀಸ್ ಅಧಿಕಾರಿಯ ಮಾನವ ಹಕ್ಕು ಉಲ್ಲಂಘನೆ ಯಾಗಲಿಲ್ಲವೇ ಎಂದು ಪ್ರಶ್ನಿಸಿದರು. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಶಾಸಕ ಜಗದೀಶ್ಧಿಕುಮಾರ್, ಪ್ರವೀಣ್ ಶೆಟ್ಟಿ, ಎಂ.ಆನಂದ್ ಇತರರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com