
ಬೆಂಗಳೂರು: ಮೆಜೆಸ್ಟಿಕ್‌ನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್‌ಗೆ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿಯಾಗಿರುವ ದಾರುಣ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಮೌಂಟ್ ಕಾರ್ಮೆಲ್ ಕಾಲೇಜ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ತಲೆ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಪೂರ್ಣಿಮಾ(18) ಎಂದು ಗುರುತಿಸಲಾಗಿದ್ದು, ಬಸ್ ನಿಲ್ದಾಣ ಪ್ರವೇಶಿಸುತ್ತಿದ್ದ ವೇಳೆ ಏಕಾಏಕಿ ಬಂದ ಬಿಎಂಟಿಸಿ ಬಸ್ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ.
ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದನ್ನು ನೋಡಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಉಪ್ಪಾರಪೇಟೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement