ಈಶ್ವರಪ್ಪ ಹುಚ್ಚಾಸ್ಪತ್ರೆಗೆ ಅಣಕು ಪ್ರದರ್ಶನ

ಖಾಸಗಿ ಸುದ್ದಿ ವಾಹಿನಿಯ ವರದಿಗಾರ್ತಿಗೆ ಅಸಭ್ಯ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ರೀತಿ ಪ್ರತಿಭಟಿಸಿದರು...
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಖಾಸಗಿ ಸುದ್ದಿ ವಾಹಿನಿಯ ವರದಿಗಾರ್ತಿಗೆ ಅಸಭ್ಯ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ರೀತಿ ಪ್ರತಿಭಟಿಸಿದರು.

ಈಶ್ವರಪ್ಪ ಅವರಂತೆ ಮುಖವಾಡ ಧರಿಸಿದ ವ್ಯಕ್ತಿಯೊಬ್ಬರನ್ನು ಆಂಬ್ಯುಲೆನ್ಸ್ ಮೂಲಕ ಹುಚ್ಚಾಸ್ಪತ್ರೆಗೆ ಕಳುಹಿಸುವ ಅಣಕು ಪ್ರದರ್ಶನ ನೀಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ``ಬಿಜೆಪಿಯವರು ತಾವೇ ಭಾರತೀಯ ಸಂಸ್ಕೃತಿ ರಕ್ಷಕರು ಎಂಬಂತೆ ವರ್ತಿಸುತ್ತಿದ್ದಾರೆ. ಆದರೆ ಈಶ್ವರಪ್ಪ ಮಾತಿನಿಂದ ಅವರ ನಿಜವಾದ ಮುಖ ಬಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ನಂಥವರಿಗೆ ಪದೋನ್ನತಿ ನೀಡಬೇಕು,'' ಎಂದು ವ್ಯಂಗ್ಯವಾಡಿದರು.

ಈಶ್ವರಪ್ಪ ವಿರುದ್ಧ ದೂರು ದಾಖಲು

ಪತ್ರಕರ್ತೆ ಕೇಳಿದ ಪ್ರಶ್ನೆಗೆ ಅವಹೇಳನಕಾರಿಯಾ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ವಿಧಾನಸೌಧ
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್‍ಟಿಐ ಕಾರ್ಯಕರ್ತ ಹನುಮೇಗೌಡ ದೂರು ನೀಡಿದ್ದು, ಉನ್ನತ ಸ್ಥಾನದಲ್ಲಿರುವ ರಾಜಕಾರಣಿಯಾಗಿ ಇಂತಹ ಬೇಜವಾಬ್ದಾರಿತನದ
ಹೇಳಿಕೆ ನೀಡಿದರೆ ಸಾಮಾನ್ಯ ಜನತೆಗೆ ಅವರಿಂದ ಯಾವ ರೀತಿಯ ರಕ್ಷಣೆ ನಿರೀಕ್ಷಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಮಹಿಳೆಯರಿಗೆ ಅಪಮಾನ ಉಂಟು ಮಾಡುವ ಹೇಳಿಕೆಗಳನ್ನು ಪದೇ ಪದೇ ನೀಡುತ್ತಿರುವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹನುಮೇಗೌಡ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com