ಕಲಬುರ್ಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆ ಶೀಘ್ರ ಆರಂಭ

ಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹೃದ್ರೋಗಿಗಳು ಜಯದೇವ...
ಬೆಂಗಳೂರಿನ ಜಯದೇವ ಆಸ್ಪತ್ರೆ
ಬೆಂಗಳೂರಿನ ಜಯದೇವ ಆಸ್ಪತ್ರೆ

ಬೆಂಗಳೂರು: ಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹೃದ್ರೋಗಿಗಳು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇನ್ನುಮುಂದೆ ಬೆಂಗಳೂರಿಗೆ ಬರಬೇಕಾಗಿಲ್ಲ. ಕೆಲವೇ ತಿಂಗಳಲ್ಲಿ ಜಯದೇವ ಆಸ್ಪತ್ರೆ ಕಲಬುರ್ಗಿಯಲ್ಲಿ 114 ಹಾಸಿಗೆಗಳ ನೂತನ ಶಾಖೆ ಆರಂಭಿಸುತ್ತಿದೆ.

40 ಐಸಿಯು ಬೆಡ್ ಸೇರಿದಂತೆ ಒಟ್ಟು 114 ಬೆಡ್‌ಗಳ ಶಾಖೆಯನ್ನು ಕಲಬುರ್ಗಿಯಲ್ಲಿ ಆರಂಭಿಸಲಾಗುತ್ತಿದೆ. ಇದಕ್ಕಾಗಿ ನಾವು ಈಗಾಗಲೇ ಕೆಲವು ಹೃದಯ ರೋಗ ತಜ್ಞರನ್ನು ಗುರುತಿಸಿದ್ದೇವೆ ಮತ್ತು ನಾಲ್ವರು ಕರ್ತವ್ಯ ನಿರತ ವೈದ್ಯರನ್ನು, ಇಬ್ಬರು ಸರ್ಜನ್‌ಗಳನ್ನು ಹಾಗೂ ಇಬ್ಬರು ಅರಿವಳಿಕೆ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿರುವ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆ ಆವರಣದಲ್ಲಿ 15 ಕೋಟಿ ರುಪಾಯಿ ವೆಚ್ಚದಲ್ಲಿ ಜಯದೇವ ಶಾಖೆ ಆರಂಭಿಸಲಾಗುತ್ತಿದ್ದು, ಇದಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ 6 ಕೋಟಿ ರುಪಾಯಿ ಅನುದಾನ ನೀಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com