ಕಸ್ತೂರಿ ರಂಗನ್ ವರದಿ ಡಿಸೆಂಬರ್ ನಲ್ಲಿ ಸಭೆ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್

ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ವರ್ಷಾಂತ್ಯದಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು.
ಪ್ರಕಾಶ್ ಜಾವ್ಡೇಕರ್
ಪ್ರಕಾಶ್ ಜಾವ್ಡೇಕರ್

ಬೆಂಗಳೂರು:ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ವರ್ಷಾಂತ್ಯದಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು.
ಮರ ವಿಜ್ಞಾನ ಹಾಗೂ ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತು ಈಗಾಗಲೇ ಹಲವಾರು ರಾಜ್ಯಗಳು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಿವೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದ್ದು ಡಿಸೆಂಬರ್ ಅಥವಾ ಜನವರಿಯಲ್ಲಿ ಎಲ್ಲಾ ರಾಜ್ಯಗಳ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಸ್ತೂರಿ ರಂಗನ್ ವರದಿ ಕುರಿತು ತಮಿಳುನಾಡನ್ನು ಹೊರತುಪಡಿಸಿ ಕರ್ನಾಟಕ, ಕೇರಳ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ ರಾಜ್ಯಗಳು ತಮ್ಮ ಅಭಿಪ್ರಾಯ ನೀಡಿವೆ. ಯಾವುದೇ ರಾಜ್ಯಕ್ಕೂ ತೊಂದರೆಯಾಗದಂತೆ ಸರಿದೂಗಿಸುವಂತಹ ನಿರ್ಧಾರವನ್ನು ಕೇಂದ್ರ ಕೈಗೊಳ್ಳಲಿದೆ. ವರ್ಷಾರಂಭದಲ್ಲಿ ಅನುಷ್ಠಾನ ವರದಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಘನತ್ಯಾಜ್ಯ ವಿಲೇವಾರಿ ನೀತಿ: ಘನತ್ಯಾಜ್ಯ ನಿರ್ವಹಣೆ ಸಂಬಂಧ ನೂತನ ನೀತಿಯನ್ನು ಮಕರ ಸಂಕ್ರಮಣದ ಸಂದರ್ಭದಲ್ಲಿ ಜಾರಿಗೊಳೀಸಲು ಉದ್ದೇಶಿಸಲಾಗಿದೆ. ಇದರಲ್ಲಿ ಔಷಧ ತ್ಯಾಜ್ಯ, ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಗಣೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com