ಮತ್ತೆ ಸಂಪುಟ ವಿಸ್ತರಣೆ ಕಸರತ್ತು: ಸಿದ್ದರಾಮಯ್ಯ, ಪರಮೇಶ್ವರ್ ದೆಹಲಿಗೆ

ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್‌ ನಾಯಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್
Updated on: 

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್‌ ನಾಯಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ನಾಡಿದ್ದು ಭಾನುವಾರ ದೆಹಲಿಗೆ ತೆರಳಲಿದ್ದಾರೆ.

ಅವರು ಸೋಮವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಹಾಗೂ ಪಕ್ಷದ ಇತರೆ ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಎದುರಾಗುತ್ತಿರುವ ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆಯಷ್ಟೇ ಸಾಕೆ? ಪುನರ್‌ ರಚನೆಯನ್ನೂ ಮಾಡಬೇಕೇ ಎಂಬ ಬಗ್ಗೆ ತಮಗಿರುವ ಗೊಂದಲವನ್ನು ವರಿಷ್ಠರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪರಮೇಶ್ವರ್‌ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com