ದ್ವಿದಳ ಧಾನ್ಯ ದಾಸ್ತಾನು ಮೇಲೆ ದಾಳಿ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ದ್ವಿದಳ ಧಾನ್ಯಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದಾಳಿ ನಡೆಸಲಾಗುತ್ತಿದ್ದು, ಅದನ್ನು ಮುಂದುವರೆಸುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಗೇಳಿದ್ದಾರೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಬೆಂಗಳೂರು: ದ್ವಿದಳ ಧಾನ್ಯಗಳ ಕೊರತೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನುಗಳ ಮೇಲೆ ರಾಜ್ಯಾದ್ಯಂತ ದಾಳಿ ನಡೆಸಲಾಗುತ್ತಿದ್ದು, ಅದನ್ನು ಮುಂದುವರೆಸುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಗೇಳಿದ್ದಾರೆ.
ಈಗಾಗಲೇ ಬೆಂಗಳೂರು ನಗರ, ಬೀದರ್, ಗುಲ್ಬರ್ಗ, ಮೈಸೂರಿನಲ್ಲಿ ದಾಳಿ ಕಾರ್ಯ ನಡೆದಿದೆ. ಮೈಸೂರಿನಲ್ಲಿ ರೂ.4 .5 ಕೋಟಿ ಮೊತ್ತದ 3600 ಕ್ವಿಂಟಾಲ್ ತೊಗರಿ ಬೆಲೆ ವಶಪಡಿಸಿಕೊಳ್ಳಲಾಗಿದೆ. ಬೀದರ್ ನಲ್ಲಿ 1200 ಕ್ವಿಂಟಾಲ್ ಸೇರಿದಂತೆ 4800 ಕ್ವಿಂಟಾಲ್ ತೊಗರಿ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಧಾನ್ಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಹರಾಜು ನಡೆಸಿ ಅದು ಮಾರುಕಟ್ಟೆ ಪ್ರವೇಶಿಸುವಂತೆ ನೋಡಿಕೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಅಲ್ಲದೇ ಮಾಲ್ ಗಳಲ್ಲಿ ಹಾಗೂ ಸಗಟು ಸಂಗ್ರಹ 2000 ಕ್ವಿಂಟಾಲ್ ಗೆ ಸೀಮಿತಗೊಳಿಸಲಾಗುವುದು. ಜೊತೆಗೆ ಧಾನ್ಯ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಸುತ್ತೋಲೆ ಹೊರಡಿಸಿದ್ದು, ಸಗಟು ಸಂಗ್ರಹ ಪ್ರಮಾಣವನ್ನು ನಿಯಂತ್ರಣ ಮಾಡುವಂತೆ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೋಧಕಾರ್ಯವನ್ನು ನಿಯಮಿತವಾಗಿ ನಡೆಸುತ್ತಿದೆ. ಎಲ್ಲದಕ್ಕಿಂತ ಮುಖ್ಯವಾಗಿ ದ್ವಿದಳ ಧಾನ್ಯಗಳ ಕಾಳಸಂತೆಯನ್ನು ತಡೆಗಟ್ಟುವುದಕ್ಕೆ ಬುಧವಾರ ಬೆಂಗಳೂರಿನಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದರು.
ದ್ವಿದಳ ಧಾನ್ಯಗಳ ಬೆಲೆ ಏರಿಕೆ ನಿಯಂತ್ರಣ ವಿಚಾರದಲ್ಲಿ ರಾಜ್ಯದ ಪಾತ್ರ ಏನೂ ಇಲ್ಲ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿತ್ತು. ಕೇಂದ್ರ ಎಡವಿದೆ ಎಂದು ಆಪಾದಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com