ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಮತ್ತು ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್
ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಮತ್ತು ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್

ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ದೂರು ವಾಪಸ್

ಕ್ರಿಕೆಟಿಗ ಅಮಿತ್ ಮಿಶ್ರಾ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್ ದೂರು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ...

ಬೆಂಗಳೂರು: ಕ್ರಿಕೆಟಿಗ ಅಮಿತ್ ಮಿಶ್ರಾ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್ ದೂರು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.

ಅಮಿತ್ ಮಿಶ್ರಾಗೆ ತನ್ನ ತಪ್ಪಿನ ಅರಿವಾಗಿದೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಹಲ್ಲೆ ಮತ್ತು ನಿಂದನೆಯಿಂದ ನೊಂದು ಪ್ರಕರಣ ದಾಖಲಿಸಿದ್ದೆ. ಆದರೆ, ಪ್ರಕರಣ ದಾಖಲಿಸಿದ ಬಳಿಕ 15 ದಿನಗಳ ನಂತರ ಇಬ್ಬರು ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದೇವೆ. ತಪ್ಪಿನ ಬಗ್ಗೆ ಅರಿವಾಗಿ ಪಶ್ಚಾತ್ತಾಪವಾಗಿದೆ ಎಂದು ಹೇಳಿ ಅಮಿತ್ ಮಿಶ್ರಾ ಕ್ಷಮೆ ಕೋರಿದ್ದಾರೆ. ಹೀಗಾಗಿ ದೂರು ವಾಪಸ್ ಪಡೆಯಲು ನಿರ್ಧರಿಸಿದ್ದೇನೆ ಎಂದು ಮಾಧ್ಯಮದ ಎದುರು ವಂದನಾ ಹೇಳಿದ್ದಾರೆ.

ನಮ್ಮಿಬ್ಬರ ನಡುವೆ ಕೆಲವು ವೈಯಕ್ತಿಕ ಗೊಂದಲ ಹಾಗೂ ಸಮಸ್ಯೆಗಳಿವೆ. ಈ ಬಗ್ಗೆ ಇಬ್ಬರು ಮುಖಾಮುಖಿ ಕುಳಿತು ಬಗೆಹರಿಸಿಕೊಳ್ಳಬೇಕಾಗಿದೆ. ದೂರು ವಾಪಸ್ ಪಡೆಯಲು ಅವರು ಖುದ್ದು ಹಾಜರಾಗಬೇಕಿದೆ. ಹೀಗಾಗಿ ಅಮಿತ್ ಮಿಶ್ರಾ ಬರುವಿಕೆಗಾಗಿ ಕಾಯುತ್ತಿರುವುದಾಗಿ ಅವರು ಹೇಳಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಸೆ.25 ರಂದು ಬೆಂಗಳೂರಿಗೆ ಬಂದಿದ್ದ ಅಮಿತ್ ಮಿಶ್ರಾ, ರೆಸಿಡೆನ್ಸಿ ರಸ್ತೆಯಲ್ಲಿರುವ ರೆಟ್ಜ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ರಾತ್ರಿ 7 ಗಂಟೆಗೆ ಮಿಶ್ರಾ ತಂಗಿದ್ದ ಕೊಠಡಿಗೆ ಹೋಗಾದ ತಮ್ಮ ಮೇಲೆ ಹಲ್ಲೆ ಮಾಡಿ ನಿಂದಿಸಿದ್ದರು ಎಂದು ಆರೋಪಿಸಿ ಸೆ.27ರಂದು ಅಶೋಕನಗರ ಠಾಣೆಯಲ್ಲಿ ವಂದನಾ ದೂರು ದಾಖಲಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com