ನವೆಂಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ?

ಹಲವು ಸಮಯಗಳ ಊಹಾಪೋಹ, ವದಂತಿಗಳು, ರಾಜಕೀಯ ಸರ್ಕಸ್ ನ ಬಳಿಕ ಕೊನೆಗೂ ರಾಜ್ಯ ಸಚಿವ ಸಂಪುಟ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು: ಹಲವು ಸಮಯಗಳ ಊಹಾಪೋಹ, ವದಂತಿಗಳು, ರಾಜಕೀಯ ಸರ್ಕಸ್ ನ ಬಳಿಕ ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕಾಣವ ಸಾಧ್ಯತೆಯಿದೆ.

ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಈಗಾಗಲೇ ದೆಹಲಿ ಸೇರಿದ್ದಾರೆ. ಇಂದೇ ಮಾತುಕತೆ ನಡೆಯುವ ಸಾಧ್ಯತೆಯಿದೆ.

ಸಿಎಂ ಆಪ್ತ ಮೂಲಗಳ ಪ್ರಕಾರ, ಈ ಬಾರಿ ಮುಖ್ಯಮಂತ್ರಿಯವರು ಸಂಪುಟ ವಿಸ್ತರಣೆಗಿಂತ ಪುನಾರಚನೆ ಮಾಡುವ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ ಎನ್ನಲಾಗುತ್ತಿದೆ.ಖಾಲಿ ಇರುವ ನಾಲ್ಕು ಸ್ಥಾನಗಳ ಜತೆಗೆ ಆರೇಳು ಮಂದಿ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಎಂಟರಿಂದ ಹತ್ತು ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಂಭವವಿದೆ ಎನ್ನಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಒತ್ತಡ ನಿರ್ಮಾಣವಾಗಿರುವುದರಿಂದ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳುವುದು ಉತ್ತಮ ಎಂದು ಸಲಹೆಗಳನ್ನು ನೀಡಲಾಗುತ್ತಿದೆ. ಆದರೆ, ಸಿಎಂ ಇದುವರೆಗೂ ತಮ್ಮ ಆಪ್ತ ಬಳಗದ ಬಳಿ ವ್ಯಕ್ತಪಡಿಸಿರುವ ಅಭಿಪ್ರಾಯದ ಪ್ರಕಾರ ವಿಸ್ತರಣೆಗಿಂತ ಪುನಾರಚನೆ ಸಾಧ್ಯತೆಗಳು ಹೆಚ್ಚು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com