ಅಪಘಾತದಲ್ಲಿ ಖಾಸಗಿ ಕಂಪನಿ ಉದ್ಯೋಗಿ ಸಾವು

ಬೈಕ್‍ನಲ್ಲಿ ತ್ರಿಬ್ಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ಆರ್.ಟಿ. ನಗರ ಸಮೀಪದ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು; ಬೈಕ್‍ನಲ್ಲಿ ತ್ರಿಬ್ಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ಆರ್.ಟಿ. ನಗರ ಸಮೀಪದ ದೇವೇಗೌಡ ರಸ್ತೆಯಲ್ಲಿ ನಡೆದಿದೆ.

ಕಾವಲ್‍ಬೈರಸಂದ್ರ ನಿವಾಸಿ ಅವಿನಾಶ್ (21) ಮೃತ ಯುವಕ. ಗೊರಗುಂಟೆಪಾಳ್ಯದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವಿನಾಶ, ಶನಿವಾರ ಬೆಳಗ್ಗೆ 6 ಗಂಟೆಗೆ ಸ್ನೇಹಿತರಾದ ಚಂದ್ರು ಮತ್ತು ನರೇಶ್ ಎಂಬುವರ ಜತೆ ದೇವೇಗೌಡ ರಸ್ತೆ ತಿಮ್ಮಯ್ಯ ಗಾರ್ಡನ್ ಬಳಿ ಒಂದೇ ಬೈಕ್‍ನಲ್ಲಿ ಹೋಗುತ್ತಿದ್ದರು. ವಾಹನವೊಂದು ದಿಢೀರನೇ ಎದುರು ಬಂದಿದ್ದರಿಂದ ಬೈಕ್ ಚಲಾಯಿಸುತ್ತಿದ್ದ ಚಂದ್ರು ಬ್ರೇಕ್ ಹಾಕಿದ್ದಾರೆ. ಆಗ ಮಧ್ಯೆ ಕುಳಿತಿದ್ದ ಅವಿನಾಶ್ ಗಾಬರಿಗೊಂಡು ಕೆಳಗೆ ಬಿದ್ದು ಮೊಳಕಾಲಿಗೆ ಪೆಟ್ಟುಮಾಡಿಕೊಂಡಿದ್ದರು. ಗಾಯಗೊಂಡ ಅವರನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಿದ್ದರು. ಆದರೆ, ಅವಿನಾಶ್‍ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.
ಕೂಡಲೇ ಪಾಲಕರು ನಾಗವಾರದ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ವಾಪಸ್ ಮನೆಗೆ ಕರೆದೊಯ್ದಿದ್ದರು. ಆದರೆ, ಸಂಜೆ ವೇಳೆಗೆ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ರಾಮಯ್ಯ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ಫಲಿಸದೇ ರಾತ್ರಿ 8.30 ರ ಸುಮಾರಿಗೆ ಅವಿನಾಶ್ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಪಾಲಕರಿಗೆ ಹಸ್ತಾಂತರಿಸಲಾಗಿದೆ. ಪರೀಕ್ಷೆ ವರದಿ ಬಂದ ನಂತರ ಸಾವಿಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com