ಅತ್ಯಾಚಾರ ವಿರೋಧಿಸಿದ ಸೊಸೆಗೆ ಮಾವನಿಂದಲೇ ಬೆಂಕಿ, ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಸೊಸೆಯ ಮೈಮೇಲೆ ಆಕೆಯ ಮಾವನೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದ ಅಮಾನವೀಯ...
ಮೃತ ಮಹಿಳೆ ಹಾಗೂ ಆರೋಪಿ ಮಾವ
ಮೃತ ಮಹಿಳೆ ಹಾಗೂ ಆರೋಪಿ ಮಾವ
Updated on: 

ದಾವಣಗೆರೆ: ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಸೊಸೆಯ ಮೈಮೇಲೆ ಆಕೆಯ ಮಾವನೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದ ಅಮಾನವೀಯ ಘಟನೆ ದಾವಣಗೆರೆಯ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

8 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸೊಸೆಯ ಮೇಲೆ ಸ್ವತಃ ಮಾವನೇ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಹೀಗೆ ನಿರಂತರ ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕ್ರೋಶಗೊಂಡ ಮಾವ ಅಕ್ಟೋಬರ್ 18ರಂದು ಸೊಸೆ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿದ್ದ.

ತೀವ್ರವಾದ ಸುಟ್ಟ ಗಾಯಗಳಿಂದ ನರಳುತ್ತಿದ್ದ ಮಹಿಳೆಯನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಹತ್ತು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಬೋರಲಿಂಗಯ್ಯ ಅವರು, ಪೋಷಕರು ನೀಡಿರುವ ದೂರಿನಲ್ಲಿ ಗೊಂದಲವಿದೆ. ಆದರೂ ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com