ಲೋಕಾಯುಕ್ತ ತನಿಖಾ ವರದಿ ರದ್ದು

Published On :
ಬೆಂಗಳೂರು: ರಾಜ್ಯದ ವಿವಿಧ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಸರ್ಕಾರದ ಅನುಮತಿ ಇಲ್ಲದೆ ಮುದ್ರಾಂಕ ಶುಲ್ಕ ಮೊತ್ತವನ್ನು ಕಡಿಮೆ ಮಾಡುವ ಮೂಲಕ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪ ಸಂಬಂಧ 10 ಮಂದಿ ನಿವೃತ್ತಉಪನೋಂದಣಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ತನಿಖಾ ವರದಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ 2003ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದ ತನಿಖಾ ವರದಿ ರದ್ದು ಕೋರಿ ಆರ್.ಆನಂದರಾಜ ಶೇಖರ್ ಸೇರಿದಂತೆ 10 ಮಂದಿ ನಿವೃತ್ತ ಉಪನೋಂದಣಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾ.ಆನಂದ ಬೈರಾರೆಡ್ಡಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ವರದಿಯಲ್ಲಿ ಅರ್ಜಿದಾರರ ವಿರುದ್ಧ
ಆರೋಪಗಳನ್ನು ಸಾಬೀತುಪಡಿಸುವ ಪೂರಕ ಸಾಕ್ಷಿಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿಲ್ಲ. ಹೀಗಾಗಿ ಲೋಕಾಯುಕ್ತ ತನಿಖೆ ಸಾಕಷ್ಟು ಲೋಪದೋಷಗಳಿವೆ. ಅಲ್ಲದೆ, ವರದಿ ಕಾನೂನುಬದ್ಧವಾಗಿಲ್ಲ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರರು 1982-83ರ ಅವಧಿಯಲ್ಲಿ ಸಬ್ ರಿಜಿಸ್ಟ್ರಾರ್ ಹುದ್ದೆಗಳಿಗೆ ನೇಮಕಗೊಂಡಿ ದ್ದರು. ಸರ್ಕಾರದ ಅನುಮತಿ ಇಲ್ಲದೆ ಸಬ್ ರಿಜಿಸ್ಟ್ರಾರ್‍ಗಳ ಕಚೇರಿಯಲ್ಲಿಮುದ್ರಾಂಕ ಶುಲ್ಕ ಮೊತ್ತ ಕಡಿಮೆ ಮಾಡಿ, ಆ ಮೂಲಕ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದರು ಎಂಬ ಆರೋಪ ಈ ಅರ್ಜಿದಾರರ ವಿರುದ್ಧ ಕೇಳಿ ಬಂದಿತ್ತು. ಹೀಗಾಗಿ, 2003ರಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಈ ವರದಿ ಪ್ರಶ್ನಿಸಿದ್ದ ಅರ್ಜಿದಾರರು, ಸರ್ಕಾರಕ್ಕೆ ಸಲ್ಲಿಸಿದ್ದ ವರದಿ ಕಾನೂನುಬದ್ಧವಾಗಿಲ್ಲ. ಆರೋಪ ಕೇಳಿ ಬಂದ ಹಲವು ವರ್ಷಗಳ ನಂತರ ತನಿಖೆ
ನಡೆಸಲಾಗಿದೆ. ತನಿಖೆಯಲ್ಲಿ ಆರೋಪ ದೃಢಪಡಿಸುವಂತಹ ಸಾಕ್ಷ್ಯಾಧಾರ ಒದಗಿಸಿಲ್ಲ. ಮೇಲಾಗಿ ತಾವು ನಿವೃತ್ತರಾಗಿದ್ದೇವೆ. ಇದೀಗ ವಿಚಾರಣಾ ಪ್ರಕ್ರಿಯೆ ನಡೆಸಿದರೆ, ಅದು ನ್ಯಾಯಾಂಗ ಪ್ರಕ್ರಿಯೆ ದುರ್ಬಳಕೆಯಾಗುತ್ತದೆ ಎಂದು ಆರೋಪಿಸಿ, ಸರ್ಕಾರಕ್ಕೆ ಸಲ್ಲಿಸಿದ್ದ ತನಿಖಾ ವರದಿ ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


