

ಬೆಂಗಳೂರು: ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ಸೂಚಿಸಿದ್ದ ಕಾಮಗಾರಿಗಳ ಪ್ರಗತಿಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಶನಿವಾರ ವಿಧಾನಸೌಧದಲ್ಲಿ ಸಭೆ ನಡೆಸಿದರು.
ಸುಮಾರು 3 ತಾಸು ನಡೆದ ಸಭೆಯಲ್ಲಿ ಬೆಂಗಳೂರಿನ ಶಾಸಕರು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದು ಚರ್ಚೆ ನಡೆಸಿದರು. ತಮ್ಮ ಸಲಹೆಗಳಂತೆ ಕೆಲಸ ಕಾರ್ಯಗಳು ನಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆ ನಂತರ ಮಾಧ್ಯಮಗಳಿಗೆ ಚುಟುಕಾಗಿ ಪ್ರತಿಕ್ರಿಯಿಸಿದ ಸಿಎಂ, ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ಸೂಚಿಸಿದ್ದ ಕಾಮಗಾರಿಗಳ ಪರಿಶೀಲನೆ ನಡೆಸಿದ್ದೇನೆ. ಎಲ್ಲಾ ಕಾಮಗಾರಿಗಳು ಅನುಷ್ಠಾನ ಆಗುತ್ತಿವೆ. ಬೆಳ್ಳಂದೂರು ಕೆರೆ ನೊರೆ ಸಮಸ್ಯೆ ಬಗ್ಗೆಯೂ ಚರ್ಚೆಯಾಗಿದೆ. ಸಮಸ್ಯೆ ಪರಿಹಾರಿಸಲು ಸೂಚಿಸಿದ್ದೇನೆ, ಎಂದರು.