ಜಿಲ್ಲಾ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ: ತಡೆ ನೀಡಲು ನಕಾರ

ರಾಜ್ಯೋತ್ಸವ ಪ್ರಶಸ್ತಿ: ತಡೆ ನೀಡಲು ನಕಾರ
ಹೈಕೋರ್ಟ್
Published On :
ಬೆಂಗಳೂರು:  ಸಾಧಕರು ಎಂದು ಗುರುತಿಸಿ ನೀಡಿರುವ ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿರುವಾಗ ಪ್ರಶಸ್ತಿ ವಿತರಣೆಗೆ ಮಾರ್ಗ ಸೂಚಿಗಳನ್ನು ಅಳವಡಿಸುವುದು ಅಗತ್ಯವಿದೆಯೇ? ಎಂದು  ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಹೈಕೋರ್ಟ್ ನಿರ್ದೇಶನ ವಿದ್ದರೂ ತನಗೆ 2015ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿಲ್ಲ ಎಂದು ಆರೋಪಿಸಿ ಶುಕ್ರವಾರವಷ್ಟೇ ರಾಜ್ಯ ಸರ್ಕಾರ ಪ್ರಕಟಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಶ್ನಿಸಿ ಸಾಹಿತಿ ಬಿ.ವಿ.ಸತ್ಯನಾರಾಯಣ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆನಂದ ಬೈರಾರೆಡ್ಡಿ ಅವರು, ಭಾನುವಾರ ನಡೆಯಲಿರುವ 2015ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರದಾನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದರು. ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಸರ್ಕಾರ ನೀಡುತ್ತಿರುವ ಪ್ರಶಸ್ತಿಗಳು ಜಾತಿಗಳನ್ನು ಆಧಾರವಾಗಿಟ್ಟುಕೊಂಡು ನೀಡುತ್ತಿದ್ದಾರೆ. ಸಾಧಕರಿಗೆ ಪ್ರಶಸ್ತಿ ನೀಡುತ್ತಿಲ್ಲ. ಇದಕ್ಕೆ ಸೂಕ್ತ ಮಾರ್ಗಸೂಚಿ ಇಲ್ಲದಿರುವುದೇ ಕಾರಣ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ನೀಡಿರುವ ಪ್ರಶಸ್ತಿಗಳನ್ನು
ಹಿಂತಿರುಗಿಸುತ್ತಿದ್ದಾರೆ. ಹೀಗಿರುವಾಗ ಮಾರ್ಗಸೂಚಿ ಅಗತ್ಯವೇ ಎಂದು ಮೌಖಿಕವಾಗಿ ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.