ರಾಯಚೂರು: ಐಐಟಿ ಕೈ ತಪ್ಪಿರುವ ಹಿನ್ನಲೆಯಲ್ಲಿ ತೀರ್ವ ಆಕ್ರೋಶ ವ್ಯಕ್ತಪಡಿಸಿರುವ ರಾಯಚೂರು ಹೋರಾಟಗಾರರು ಕನ್ನಡ ರಾಜ್ಯೋತ್ಸವ ಧ್ವಜಾರೋಹಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಇಂದು ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ ಅವರು ಧ್ಜಜಾರೋಹಣ ಮಾಡಲು ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಂತೆಯೇ ಹೋರಾಟಗಾರರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಹೋರಾಟಗಾರರನ್ನು ತಡೆದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿ ಧ್ವಜಾರೋಹಣಕ್ಕೆ ಅವಕಾಶ ಮಾಡಿಕೊಟ್ಟರು. ಐಐಟಿ ಕೈ ತಪ್ಪಿದ ಹಿನ್ನಲೆಯಲ್ಲಿ ನಮ್ಮ ಜಿಲ್ಲೆಗೆ ಅನ್ಯಾಯಾವಾಗಿದೆ, ಈ ಅನ್ಯಾಯವನ್ನು ಸರಿಪಡಿಸದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.