ಬೈಕಿಗೆ ಬೊಲೇರೋ ಡಿಕ್ಕಿ, ಇಬ್ಬರು ಸಾವು, 20 ಮಂದಿಗೆ ಗಾಯ

ಬೈಕಿಗೆ ಬೊಲೇರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಬೈಕಿಗೆ ಬೊಲೇರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿ ಬಳಿ ನಡೆದಿದೆ.

ಅಪಘಾತದ ತೀವ್ರತೆಗೆ ಬೊಲೇರೋ ವಾಹನ ಪಲ್ಟಿಯಾಗಿದ್ದು, ಘಟನೆಯಲ್ಲಿ ಬೈಕ್ ಸವಾರ ಸುಮಂತ್(11) ಹಾಗೂ ಬೊಲೇರೋ ವಾಹನದಲ್ಲಿದ್ದ ಶಾರದಮ್ಮ ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡವರ ಪೈಕಿ ನಾಲ್ವರು ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com