
ಬೆಂಗಳೂರು: ಮಹಾಲೇಖಪಾಲಕ (ಸಿಎಜಿ)ವರದಿ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಲು ಇರುವ ಕಾನೂನಿನ ವ್ಯಾಪ್ತಿಯೇನು ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದೆ.
ಡಿ-ನೋಟಿಫಿಕೇಶನ್ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ದುರುದ್ದೇಶದಿಂದ ಕೂಡಿದ್ದು, ಅದನ್ನು ರದ್ದುಪಡಿಸುವಂತೆ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶವನ್ನು ವಿಸ್ತರಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಯಡಿಯೂರಪ್ಪ ವಿರುದಟಛಿ ಲೋಕಾಯುಕ್ತದವರು ಎಫ್ ಐಆರ್ ದಾಖಲಿಸುವಂತೆ ಆದೇಶ ನೀಡಿ ರುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಮುಂದೆ ಲೋಕಾಯುಕ್ತದವರು ಯಡಿಯೂರಪ್ಪ ವಿರುದಟಛಿ ಎಫ್ಐಆರ್ ದಾಖಲಿಸದಂತೆ ನಿರ್ದೇಶಿಸಬೇಕು. ಈಗಾಗಲೇ ದಾಖಲಿಸಿರುವ ಎಫ್ಐಆರ್‍ಗೆ
ತಡೆ ನೀಡಬೇಕು, ಅವರನ್ನು ಬಂಧಿಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಪಿ ದಳವಾಯಿ, ಎಫ್ಐಆರ್ ದಾಖಲಿಸದಂತೆ ಲೋಕಾಯುಕ್ತದ ಅಧಿಕಾರವನ್ನು ತಡೆ ಹಿಡಿಯುವುದು ಸರಿಯಲ್ಲ. ಅರ್ಜಿದಾರರ ವಿರುದ್ಧ ಲೋಕಾಯುಕ್ತ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಿರುವುದನ್ನು ಏಕಸದಸ್ಯ ಪೀಠದಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ.
ಲೋಕಾಯುಕ್ತ ಸ್ಥಾನದಲ್ಲಿ ಕಾರ್ಯನಿರ್ವಹಿಸುವವರು ಇದೇ ಹೈಕೋರ್ಟ್‍ನಲ್ಲಿ ಮುಖ್ಯ ನ್ಯಾಯ ಮೂರ್ತಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದವರು. ಆದ್ದರಿಂದ ಈ ಕುರಿತು ಅರ್ಜಿದಾರರಿಗೆ ಆಕ್ಷೇಪವಿದ್ದರೆ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಬಹುದು ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷವಾದರೂ ಏನೂ ಆಗಿಲ್ಲ. ಈಗಲೂ ಏನು ಆಗಲ್ಲ ಎಂದು ಭರವಸೆ ನೀಡಿ ವಿಚಾರಣೆಯನ್ನು ಸೆ.10ಕ್ಕೆ ಮುಂದೂಡಿದೆ.
Advertisement