
ಬೆಂಗಳೂರು: ರಾಜ್ಯಾದ್ಯಂತ ಕೃಷ್ಣ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿ ಇಲಾಖೆ ವಿಧಾನ ಸೌಧದ ಬ್ಯಾಂಕ್ವೇಟ್ ಹಾಲ್‌ನಲ್ಲಿ ಸೆಪ್ಟೆಂಬರ್ 5 ರ ಶನಿವಾರ ಸಂಜೆ 5.30 ಕ್ಕೆ ಇದೇ ಮೊದಲ ಬಾರಿ ಶ್ರೀ ಕೃಷ್ಣ ಜಯಂತಿ ಆಚರಿಸಲು ತೀರ್ಮಾನ ತೆಗೆದುಕೊಂಡಿದೆ
ಸಿಎಂ ಸಿದ್ದರಾಮಯ್ಯ ಅವರು ಶನಿವಾರ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜನ್ಮಾಷ್ಟಮಿಯ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂದು ರಾಜ್ಯ ಗೊಲ್ಲ(ಯಾದವ) ಸಂಘದ ಅಧ್ಯಕ್ಷ ಬಿ.ಎಸ್ ಲಕ್ಷ್ಮೀಪತಿ ಹೇಳಿದ್ದಾರೆ. 'ಕೃಷ್ಣ ಜನ್ಮಾಷ್ಟಮಿ ದಿನದಂದು ನಗರ್ತರ ಪೇಟೆಯ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಮಧ್ಯಾಹ್ನ 2.30ಕ್ಕೆ ಬೆಳ್ಳಿ ರಥದಲ್ಲಿ ಶ್ರೀ ಕೃಷ್ಣನ ಮೆರವಣಿಗೆ ಬ್ಯಾಂಕ್ವೆಟ್ ಹಾಲ್‌ಗೆ ಬರಲಿದೆ.
ಕೃಷ್ಣ ಜಯಂತಿಯನ್ನು ಸರ್ಕಾರದಿಂದ ಆಚರಿಸುವಂತೆ ಯಾದವ ಸಮುದಾಯವು ರಾಜ್ಯ ಸರ್ಕಾರಕ್ಕೆ ಎರಡು ವರ್ಷದ ಹಿಂದೆಯೇ ಮನವಿ ಮಾಡಿಕೊಂಡಿತ್ತು. ಅದಕ್ಕೆ ಸ್ಪಂದಿಸಿರುವ ಸರ್ಕಾರ ಈ ಬಾರಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಚರಿಸಲು ನಿರ್ಧಾರ ತೆಗೆದುಕೊಂಡಿದೆ. ಈ ಆಚರಣೆ ರಾಜ್ಯಾದ್ಯಂತ ನಡೆಯಲಿದೆ ಎಂದರು.
Advertisement