ಬಾಲ್ಯವಿವಾಹ ತಡೆದ ಅಧಿಕಾರಿಗಳು

ರಾಜಧಾನಿಯಲ್ಲಿ ಬಾಲ್ಯ ವಿವಾಹ ಪದ್ಧತಿ ಚಾಲ್ತಿಯಲ್ಲಿದೆ ಎಂಬುದಕ್ಕೆ ಗುರುವಾರದ ಒಂದು ಪ್ರಕರಣ ನಿದರ್ಶನವಾಯಿತು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿಯಲ್ಲಿ ಬಾಲ್ಯ ವಿವಾಹ ಪದ್ಧತಿ ಚಾಲ್ತಿಯಲ್ಲಿದೆ ಎಂಬುದಕ್ಕೆ ಗುರುವಾರದ ಒಂದು ಪ್ರಕರಣ ನಿದರ್ಶನವಾಯಿತು. ಇಂತಹ ಒಂದು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪದ ಮೇಲೆ ದಾಳಿ ನಡೆಸಿದ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಬಾಲ್ಯ ವಿವಾಹ ತಡೆದಿದ್ದಾರೆ.

15 ವರ್ಷದ ಅಪ್ರಾಪ್ತೆಗೆ ಸಂಬಂಧಿಕ ಉದ್ಯಮಿ ಜತೆಗೆ ಮದುವೆ ನಿಶ್ಚಯಿಸಲಾಗಿತ್ತು. ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿರುವ ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ ಮೂಹೂರ್ತ ನಿಗದಿಯಾಗಿತ್ತು. ಆದರೆ, ಅನಾಮಧೇಯ ವ್ಯಕ್ತಿಯೊಬ್ಬ ಮಕ್ಕಳ ಸಹಾಯವಾಣಿಗೆ ಫೋನ್  ಮಾಡಿ, ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಅಪ್ರಾಪ್ತೆಗೆ ಬಲವಂತದ ಮದುವೆ ಮಾಡ ಲಾಗುತ್ತಿದೆ ಎಂದು ದೂರು ನೀಡಿದ್ದ. ಮದುವೆ ಮಂಟಪದ ಮೇಲೆ ದಾಳಿ ನಡೆಸಿದ ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀ ಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ನಡೆಯುತ್ತಿದ್ದ ಆರತಕ್ಷತೆ ತಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com