ಬಾಬಾ ಬುಡನ್ ಗಿರಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಇನ್ನು ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್‍ರಾವ್ ಅವರು ಕಾನೂನು ಪರದಿಯಲ್ಲಿಯೇ ರಜೆಯ ಮೇಲೆ ತೆರಳಿದ್ದು, ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಲೋಕಾಯುಕ್ತ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಎಸ್‍ಐಟಿ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದೆ ಎಂದು ಹೇಳಿದರು.