

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ ನಿಯಮದ ಪ್ರಕಾರ 30 ದಿನಗಳ ಕಾಲಾವಧಿಯಲ್ಲಿ ಸೂಕ್ತ ಮಾಹಿತಿ ನೀಡದ ರಾಜ್ಯಪಾಲರ ಕಚೇರಿಯ ಮಾಹಿತಿ ಹಕ್ಕು ಅಧಿಕಾರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ರು.5 ಸಾವಿರ ದಂಡ ವಿಧಿಸಿದೆ.
ಆರ್ ಟಿಐ ಕಾರ್ಯಕರ್ತ ನರಸಿಂಹ ಮೂರ್ತಿಯವರು 2014ರ ಸೆಪ್ಟೆಂಬರ್ ನಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಪೂರ್ಣ ಪ್ರಮಾಣದ ಅಧ್ಯಕ್ಷರ ನೇಮಕದ ಬಗ್ಗೆ ಮನವಿ ಮಾಡರು ರಾಜ್ಯಪಾಲರ ಭೇಟಿಗೆ ಕಾಲಾವಕಾಶ ನೀಡುವಂತೆ ಅನುಮತಿ ಕೋರಿ ರಾಜಭವನಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗೆ ನಿಗದಿತ ಅವಧಿಯಲ್ಲಿ ಮಾಹಿತಿ ನೀಡದ ಕಾರಣ ಮಾಹಿತಿ ಹಕ್ಕು ಆಯೋಗದ ಮೊರೆ ಹೋಗಿದ್ದರು. .