ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಬಿಜೆಪಿಯು ಬಿಬಿಎಂಪಿ ಮೇಯರ್ ಚುನಾವಣೆಯ ವಿಷಯದಲ್ಲಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಂಗಳೂರು ನಗರ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ಬಾರಿಯ ಮೇಯರ್ ಚುನಾವಣೆಯಲ್ಲಿ ಪಾಲಿಕೆ ಸದಸ್ಯರಲ್ಲದೆ ಶಾಸಕರು, ಸಂಸದರು ಮತ ಚಲಾಯಿಸಲು ಒಪ್ಪಿಗೆ ನೀಡಿದ್ದ ಬಿಜೆಪಿ ಇಂದು ವಿರೋಧ ವ್ಯಕ್ತಪಡಿಸುತ್ತಿದೆ. ಈ ಮೂಲಕ ಸಂವಿಧಾನದ ಹಕ್ಕನ್ನೇ ಪ್ರಶ್ನಿಸಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ.
ಇದು ರಾಜಕೀಯ ಕುತಂತ್ರದ ಒಂದು ಭಾಗವಾಗಿದೆ. ಬಿಬಿಎಂಪಿಯಲ್ಲಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಮೊದಲು ಪ್ರಾರಂಭಿಸಿದ್ದು ಬಿಜೆಪಿ. ಐದು ವರ್ಷಗಳಲ್ಲಿ ಬಿಜೆಪಿ ಮಾಡಿದ
ದುರಾಡಳಿತವನ್ನು ನೋಡಿದ ಪಕ್ಷೇತರರು ಮತ್ತು ಜೆಡಿಎಸ್ ಈ ಸಲ ಕಾಂಗ್ರೆಸ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಅದರಿಂದ ಬಿಜೆಪಿಗೆ ನಿರಾಸೆಯÁಗಿ, ಇಂತಹ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಮಂಜುನಾಥರೆಡ್ಡಿ, ಎಂ. ಸುರೇಶ್, ಸಂಪತ್ ರಾಜ್, ಆನಂದ್, ಮಂಜುನಾಥ್ ಬಿ., ಅಂಜನಮೂರ್ತಿ, ಶೇಖರ್, ರಘು, ಅಪ್ಪಾಜಿ, ಗುಣಶೇಖರ್ ಭಾಗವಹಿಸಿದ್ದರು. ಜಗ್ಗೇಶ್ ವಿರುದಟಛಿ ಆಕ್ರೋಶ: ವಿಧಾನ ಪರಿಷತ್ ಸದಸ್ಯ ಜಗ್ಗೇಶ್ ಅವರು ಎರಡು ಕಡೆ ಮತದಾನ ಮಾಡುವ ಹಕ್ಕು ಹೊಂದಿರುವುದರಿಂದ ಚುನಾವಣಾ
ಪಟ್ಟಿಯಿಂದ ಅವರ ಹೆಸರು ಕೈಬಿಡುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ನಗರದ ಕುವೆಂಪು ಪ್ರತಿಮೆ ಎದುರು ಪ್ರತಿಭಟಿಸಿದರು. ಬಿಬಿಎಂಪಿ ಮೇಯರ್- ಉಪಮೇಯರ್ ಚುನಾವಣಾ ವೇಳೆ ಶಾಸಕ ಜಗ್ಗೇಶ್ ಅವರಿಗೆ ಮತದಾನ ಮಾಡಲು ಅವಕಾಶ ನೀಡದಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಮುಖಂಡರು ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಈ ಹಿಂದೆ ಆಪರೇಷನ್ ಕಮಲಕ್ಕೆ ಒಳಗಾದರೆಂಬ ಕುಖ್ಯಾತಿ ಪಡೆದಿರುವ ಜಗ್ಗೇಶ್ ಹಾಗೂ ಬಿಬಿಎಂಪಿ ಚುನಾವಣಾ ಉಸ್ತುವಾರಿ ಹೊತ್ತಿರುವ ಆರ್. ಅಶೋಕ್ ರಾಜ್ಯದ ಸಂಸ್ಕೃತಿ ಅರಿಯದೇ ಮಾತನಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ಬಿಜೆಪಿ ಬಿಬಿಎಂಪಿಯಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದೆ. ಇಂದು ಯಾವ ಮುಖ ಹೊತ್ತು ಇವರು ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಜರಿದರು. ಎಸ್. ಮನೋಹರ್, ಶೇಖರ್, ಅನಂಜಮೂರ್ತಿ, ರಘುವೀರ್‍ಗೌಡ, ಆನಂದ್, ಅಮ್ಜದ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


