ಮಳೆ ಬಾರದೇ ಇದ್ದರೆ ದೇವರೇ ಗತಿ: ಡಿಕೆಶಿ

ರಾಜ್ಯದಲ್ಲಿ ಇದೇ ರೀತಿ ಮಳೆ ಕೈ ಕೊಟ್ಟರೆ ದೇವರೇ ದಿಕ್ಕು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹತಾಶೆ...
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಇದೇ ರೀತಿ ಮಳೆ ಕೈ ಕೊಟ್ಟರೆ ದೇವರೇ ದಿಕ್ಕು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹತಾಶೆ ವ್ಯಕ್ತಪಡಿಸಿದ್ದಾರೆ.

ಇಂಧನ ಇಲಾಖೆ ಸಮಸ್ಯೆ ಬಗ್ಗೆ ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ ರೀತಿ ಮಳೆ ಬರದಿದ್ದರೆ ಬರ ಪರಿಸ್ಥಿತಿ ಇನ್ನಷ್ಟು ತೀವ್ರವಾಗುತ್ತದೆ. ಹೀಗಾಗಿ ರೈತರು ಮತ್ತು ಸಾರ್ವಜನಿಕರು ಇದನ್ನು ಎದುರಿಸುವುದಕ್ಕೆ ಸಜ್ಜಾಗುವುದು ಅನಿವಾರ್ಯ ಎಂದು ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ 9000 ಮೆಗಾವ್ಯಾಟ್ ಇದೆ. ಆದರೆ, 5600 ಮೆಗಾ ವ್ಯಾಟ್ ಮಾತ್ರ ಲಭ್ಯವಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದೆ. ಈಗಿರುವ ಸಂಗ್ರಹವನ್ನು ಮುಂದಿನ ಎಂಟು ತಿಂಗಳು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಲು ಸರ್ಕಾರ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ.

ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಸಾಮರ್ಥ್ಯವನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿಮಾತ್ರಬಳಸಿಕೊಳ್ಳಲಾಗುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com