ಮಂಜುನಾಥ್ ರೆಡ್ಡಿ ಬಿಬಿಎಂಪಿ ಮೇಯರ್ ಅಭ್ಯರ್ಥಿ?

ಸೆ.11 ರಂದು ಬಿಬಿಎಂಪಿ ಮೇಯರ್ ಚುನಾವಣಾ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಮೇಯರ್ ಅಭ್ಯರ್ಥಿಯನ್ನು ಆಯ್ಕೆಯನ್ನು ಅಂತಿಮಗೊಳಿಸಿದೆ.

ಬೆಂಗಳೂರು: ಸೆ.11 ರಂದು ಬಿಬಿಎಂಪಿ ಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ  ಮೇಯರ್ ಅಭ್ಯರ್ಥಿಯನ್ನು ಆಯ್ಕೆಯನ್ನು ಅಂತಿಮಗೊಳಿಸಿದೆ.     

ಖಾಸಗಿ ಮಾಧ್ಯಮಗಳ ವರದಿ ಪ್ರಕಾರ, ಮಡಿವಾಳ ಕಾರ್ಪೊರೇಟರ್ ಮಂಜುನಾಥ ರೆಡ್ಡಿ ಮೇಯರ್ ಹುದ್ದೆಯ ಅಭ್ಯರ್ಥಿಯಾಗಿ ಘೋಷಣೆಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಕಾರ್ಪೊರೇಟರ್ ಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸಭೆ ನಡೆಸಿದ್ದು, ಬಹುತೇಕ ಕಾರ್ಪೊರೇಟರ್ ಗಳು ಮಂಜುನಾಥ್ ರೆಡ್ಡಿ ಅವರ ಹೆಸರನ್ನು ಸೂಚಿಸಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮೇಯರ್ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ.

ಮೇಯರ್ ಸ್ಥಾನಕ್ಕೆ ದತ್ತಾತ್ರೇಯ ವಾರ್ಡ್ ಸದಸ್ಯ ಸತ್ಯನಾರಾಯಣ ಅವರೂ ತೀವ್ರ ಲಾಭಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸತ್ಯನಾರಾಯಣ ಅವರನ್ನು ಬೆಂಬಲಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com