ಗೌರಿ-ಗಣೇಶ ಹಬ್ಬಕ್ಕೆ ಸಾವಿರ ವಿಶೇಷ ಬಸ್

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಸೆ.15 ಮತ್ತು 16ರಂದು ಒಂದು ಸಾವಿರಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಸೆ.15 ಮತ್ತು 16ರಂದು ಒಂದು ಸಾವಿರಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‍ಗಳ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ಜಯನಗರ, ಜೆ.ಪಿ. ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಕೆಂಗೇರಿಯ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇ ಟಿಕೆಟ್ ಕಾಯ್ದಿರಿಸಲು www.ksrtc.in ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com