
ಬೆಂಗಳೂರು: ಬರ ಹಿನ್ನೆಲೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯನವರು ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಚರ್ಚಿಸಲಿದ್ದಾರೆ.
ರಾಜ್ಯದಲ್ಲಿ ಈಗಾಗಲೇ 136 ತಾಲೂಕು ಬರ ಪೀಡಿತ ಎಂದು ಘೋಷಿಸಲಾಗಿದೆ. ಈ ಮಧ್ಯೆಯೇಕೇಂದ್ರ ಬರ ಅಧ್ಯಯನ ತಂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಮಾಹಿತಿ ಕಲೆ ಹಾಕಿದೆ. ಶುಕ್ರವಾರದ ಸಭೆ ಯಲ್ಲಿ ಮುಖ್ಯಮಂತ್ರಿಯವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ರಾಜ್ಯದ ಪರಿಸಿ ್ಥತಿಯ ಅವಲೋಕನ ಮಾಡಿಕೊಡಲಿ ದ್ದಾರೆ.
ಕೇಂದ್ರದಿಂದ ರಾಜ್ಯ ಯಾವ ರೀತಿಯ ನೆರವು ಅಪೇಕ್ಷೆಪಡುತ್ತದೆಂದು ಎಂಬುದರ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಲಿದ್ದಾರೆ. ಕೇಂದ್ರ ಕೃಷಿ ಇಲಾಖೆ ಪ್ರಧಾನ ಕಾರ್ಯ ದರ್ಶಿ ಸಿನ್ಹಾ ನೇತೃತ್ವದ 9 ಅಧಿಕಾರಿಗಳ ತಂಡ 4 ತಂಡವಾಗಿ 18 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಜಿಲ್ಲಾಡಳಿತಗಳಿಂದ ಮಾಹಿತಿ ಸಂಗ್ರಹಿಸಿದೆ.
Advertisement