ಹಲಗೇರಿ(ರಾಣೇಬೆನ್ನೂರು): ಮ್ಯಾಕ್ಸಿಕ್ಯಾಬ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆಸಿದೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 10 ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ರಾಣೇಬೆನ್ನೂರು ಮೂಲದ ರಾಕೇಶ್ ಮಜ್ಜಿಗೆ(18), ಮಂಜು ಹುಂಜಿಕಟ್ಟೆ(19) ಹಾಗೂ ಪರಶುರಾಮ್(29) ಎಂದು ಗುರುತಿಸಲಾಗಿದೆ.
ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.