ಹಣಕಾಸು ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಬೆಂಗಳೂರು: ವನಪಾಲಕರ ಗೌರವಧನ ಹೆಚ್ಚಳಕ್ಕೆ ಕಂಜೂಸುತನ ತೋರಿದ ಹಣಕಾಸು ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲಿ ಈ ಘಟನೆ ನಡೆದಿದ್ದು ಹಣಕಾಸು ಇಲಾಖೆ ಯವರು ಈ ಸಂಬಂಧ ಕಳುಹಿಸಿದ್ದ ಕಡತವ ನ್ನು ವಾಪಸ್ ಕಳುಹಿಸಿದ್ದಾರೆ. ದಟ್ಟಾರಣ್ಯ ದಲ್ಲಿ ಕೆಲಸ ಮಾಡುವ ವನಪಾಲಕರು, ಕೆಳಹಂತದ ಸಿಬ್ಬಂದಿಗೆ ಮಾಸಿಕ ರು.2500- ರಿಂದ ರು.3000ದವರೆಗೆ ಗೌರವಧನ ನೀಡುವಂತೆ ಕಳೆದ ಬಾರಿ
ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದರು.
ಇಂದಿನ ಸಭೆಯಲ್ಲಿ ಆ ವಿಚಾರ ಪ್ರಸ್ತಾಪವಾಯಿತು. ಆದರೆ ಹಣಕಾಸು ಇಲಾಖೆ ಅಧಿಕಾರಿಗಳು ಕಡತದಲ್ಲಿ ರು.300ರಿಂದ ರು.450 ಮಾತ್ರ ಹೆಚ್ಚಳ ಮಾಡುವುದಕ್ಕೆ ಅನುಮತಿ ನೀಡಿದ್ದರು. ಹಣಕಾಸು ಇಲಾಖೆ ನಿಮ್ಮ ವ್ಯಾಪ್ತಿಗೆ ಸೇರಿದ್ದರೂ ಈ ರೀತಿ ಆಗಿದೆ ಎಂಬ ಆರೋಪ ವ್ಯಕ್ತವಾಗಿದ್ದು ಸಿದ್ದರಾಮಯ್ಯ ಅವರ ಕೋಪಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಕಡತವನ್ನು ವಾಪಸ್ ಕಳುಹಿಸಿದ್ದು, ನಾನು ಆದೇಶ ನೀಡಿದ ಪ್ರಕಾರ ಗೌರವಧನ ಪ್ರಮಾಣ ಹೆಚ್ಚಳ ಮಾಡಿ ಎಂದು ತಾಕೀತು ಮಾಡಿದ್ದಾರೆ.
ಇಂಧನ ಇಲಾಖೆಗೆ ಎನ್‍ಜಿಇಎಫ್?
ವಿದ್ಯುತ್ ಟ್ರಾನ್ಸ್ ಫಾರ್ಮ್ ಗಳನ್ನು ರಿಪೇರಿ ಮಾಡುವ ಎನ್‍ಜಿಇಎಫ್ ಸಂಸ್ಥೆಯನ್ನು ಇಂಧನ ಇಲಾಖೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ. ಈ ಕುರಿತು ಸದ್ಯದಲ್ಲಿಯೇ ತೀರ್ಮಾನ ತಿಳಿಸಲಾಗುವುದು ಎಂದು ಇಂಧನ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಅವರು ಎನ್ ಜಿಇಎಫ್ ಸಂಸ್ಥೆಗೆ ಭೇಟಿ ನೀಡಿದ ವೇಳೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


