

ಬೆಂಗಳೂರು: ತಾಯಿ ಬಗ್ಗೆ ಚಾಡಿ ಹೇಳಿದ ಎಂಬ ಕಾರಣಕ್ಕೆ ಬಾಲಕನೊಬ್ಬ ಯುವಕನನ್ನೇ ಹತ್ಯೆ ಮಾಡಿದ್ದಾನೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬಾ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಚರಣ್‍ಕುಮಾರ್(24) ಹತ್ಯೆಯಾದ ಯುವಕ. ನಿಮ್ಮ ಮಗ ದುಶ್ಚಟಕ್ಕೆ ಬಲಿಯಾಗುತ್ತಿದ್ದಾನೆ ಎಂದು ಚರಣ್‍ಕುಮಾರ್ ಬಾಲಕನ ತಾಯಿಗೆ ಹೇಳಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂಟಿ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರ ಸೆರೆ
ಮನೆಗೆ ನುಗ್ಗಿ ಒಂಟಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಹೆಬ್ಬಗೋಡಿ ನಿವಾಸಿಗಳಾದ ಸಂತೋಷ್ (28) ಹಾಗೂ ಆನಂದ್ (29) ಎಂಬುವವರನ್ನು ಪರಪ್ಪನ ಅಗ್ರಾಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೂಡ್ಲುಗೇಟ್ ನಿವಾಸಿ 25 ವರ್ಷದ ಮಹಿಳೆ, ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ನೀಡಿದ್ದ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ. ಪತಿಯನ್ನು ತ್ಯಜಿಸಿದ್ದ ಈಕೆ, ಮಗುವನ್ನು ಕೆ.ಆರ್.ಪೇಟೆಯಲ್ಲಿನ ಅಜ್ಜಿ ಮನೆಯಲ್ಲಿ ಬಿಟ್ಟು ಒಬ್ಬಂಟಿಯಾಗಿ ವಾಸಿಸುತ್ತಿದ್ದಳು.
ಅತ್ಯಾಚಾರಕ್ಕೊಳಗಾದ ಮಹಿಳೆಯ ಸ್ನೇಹಿತ ಶಶಾಂಕ್ ಎಂಬುವವನ ಮೂಲಕ ಪರಿಚಯವಾಗಿದ್ದ ಆರೋಪಿಗಳು ಪದೇ ಪದೇ ಆಕೆ ಮನೆಗೆ ಬಂದು ಹೋಗುತ್ತಿದ್ದರು. ಭಾನುವಾರ ರಾತ್ರಿ ಬಂದ ಆರೋಪಿಗಳು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಸಹಾಯಕ್ಕಾಗಿ ಆಕೆ ಕಿರುಚಿದಾರ ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಮತ್ತೆ ಬಂದು ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ.