

ಉಪ್ಪಿನಂಗಡಿ: ರಾಜ್ಯದಲ್ಲಿ ಮತ್ತೊಂದು ನದಿ ಹೋರಾಟ ಪ್ರಾರಂಭವಾಗುತ್ತಿದೆ. ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಮಂಗಳವಾರ ಹೆದ್ದಾರಿ ತಡೆ ಹಾಗೂ ಜೈಲ್ ಭರೋ ಚಳವಳಿಗೆ ದಕ್ಷಿಣ ಕನ್ನಡ ಜನ ಸಿದ್ಧಗೊಂಡಿದ್ದಾರೆ. ಜಿಲ್ಲಾದ್ಯಂತ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದೆ. ಮುಂಜಾ ಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಆದರೆ, ಸಂಚಾರ ಅಸ್ತವ್ಯಸ್ತ ವಾಗುವ ಎಲ್ಲ ಸಾಧ್ಯತೆ ಇದ್ದು, ಪರ್ಯಾಯ ವ್ಯವಸ್ಥೆಗೂ ಚಿಂತಿಸಲಾಗಿದೆ. ನೇತ್ರಾವತಿ ನದಿ ತಿರುವು ವಿರೋಧಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಹೋರಾಟದಲ್ಲಿ ಪಾಲ್ಗೊಳ್ಳಲಿವೆ. ಜಿಲ್ಲಾದ್ಯಂತ ಭಾರಿ ಸಂಖ್ಯೆಯಲ್ಲಿ ಜನತೆ ಆಗಮಿಸುವ ಸಾಧ್ಯತೆ ಇದ್ದು, ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ದ.ಕ. ಜಿಲ್ಲೆಯ ತುಳು ಚಿತ್ರರಂಗ ಈಗಾಗಲೇ ನದಿ ತಿರುವು ಯೋಜನೆಯನ್ನು ವಿರೋಧಿಸಿ ನಡೆಯುವ ಹೋರಾಟಕ್ಕೆ ಬೆಂಬಲ ಸೂಚಿಸಿದೆ. ಅಲ್ಲದೆ, ಕಲಾವಿದರ ತಂಡ ಹೋರಾಟದಲ್ಲಿ ಭಾಗವಹಿಸಲಿದೆ ಎಂದು ಯುವ ನಟ ಅರ್ಜುನ್ ಕಾಪಿಕಾಡ್ ಹಾಗೂ ನಿರ್ಮಾಪಕ ಸಚಿನ್ ಎಸ್. ಗೌಡ ತಿಳಿಸಿದ್ದಾರೆ.
ಬಿಗಿ ಭದ್ರತೆ: ಪ್ರತಿಭಟನೆ ಕಾವನ್ನು ಅರಿತಿರುವ ರಾಜ್ಯ ಸರ್ಕಾರ ಪೊಲೀಸ್ ಬಿಗಿ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಿದೆ. ರಾಜ್ಯಾದ್ಯಂತ ಪೊಲೀಸ್ ತಂಡವನ್ನು ಕರೆಸಿಕೊಂಡಿದ್ದು, ಉಪ್ಪಿನಂಗಡಿಯಸುತ್ತಮುತ್ತ 1200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
ಬದಲಿ ಮಾರ್ಗ
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲಿವೆ.
ಹೆದ್ದಾರಿಯಲ್ಲಿ ಯಾವುದೇ ವಾಹನಗಳು ಪ್ರತಿಭಟನಾಕಾರರ ಆಕ್ರೋಶಕ್ಕೆ ಸಿಲುಕ ಬಾರದು ಎಂಬ ಉದ್ದೇಶದಿಂದ ಈ ಕ್ರಮ