ಡಿನೋಟಿಫಿಕೇಶನ್: ಯಡಿಯೂರಪ್ಪ 3 ಪ್ರಕರಣಗಳಿಗೆ ಹೈ ತಡೆ

ಅಕ್ರಮ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಮಾಜಿ ಸಿಎಂ, ಸಂಸದ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ...
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಮಾಜಿ ಸಿಎಂ, ಸಂಸದ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿ ಸಿರುವ ಮೂರು ಪ್ರಕರಣಗಳಿಗೆ ಹೈಕೋರ್ಟ್ ತಡೆ ನೀಡಿದೆ.

ಸಿಎಜಿ ವರದಿ ಅನುಸಾರ ಲೋಕಾ ಪೊಲೀಸರು ದಾಖಲಿ ಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ರತ್ನಕಲಾಅವರಿದ್ದ ಏಕಸದಸ್ಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.

ವಾದ ಮಂಡಿಸಿದ ಸಹಾಯಕ ಸಾಲಿಸಿಟರ್ ಜನರಲ್ ಕೃಷ್ಣ ಎಸ್. ದೀಕ್ಷಿತ್, ಮಹಾಲೇಖಪಾಲರ (ಸಿಎಜಿ) ವರದಿ ಶಾಸನ ಸಭೆಯ ಸ್ವತ್ತೇ ಹೊರತು ಸಾರ್ವಜನಿಕವಾದುದ್ದಲ್ಲ. ಈ ಹಿನ್ನೆಲೆಯಲ್ಲಿ ಸಿಎಜಿ ವರದಿಯ ನ್ನಾಧರಿಸಿ ಲೋಕಾಯು ಕ್ತದಲ್ಲಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಈ ವರದಿಯ ಆಧಾರದ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಸರಿಯಾದ ನಡೆ ಎನಿಸುವುದಿಲ್ಲ ಎಂದು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com