ಬೈಕ್-ಬಸ್ ಢಿಕ್ಕಿ: ಬೈಕ್ ಸವಾರನ ಸಾವು, ಬಸ್ ಗೆ ಬೆಂಕಿ

ಪುತ್ತೂರು ಜಿಲ್ಲೆಯ ಉಪ್ಪಿನಂಗಡಿಯ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ...
ಢಿಕ್ಕಿ ರಭಸಕ್ಕೆ ಬೆಂಕಿಗಾಹುತಿಯಾದ ಬಸ್ (ಸಾಂದರ್ಭಿಕ ಚಿತ್ರ)
ಢಿಕ್ಕಿ ರಭಸಕ್ಕೆ ಬೆಂಕಿಗಾಹುತಿಯಾದ ಬಸ್ (ಸಾಂದರ್ಭಿಕ ಚಿತ್ರ)

ಪುತ್ತೂರು: ಪುತ್ತೂರು ಜಿಲ್ಲೆಯ ಉಪ್ಪಿನಂಗಡಿಯ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಪುತ್ತೂರು ಜಿಲ್ಲೆಯ ಉಪ್ಪಿನಂಗಡಿ ಪಟ್ಟಣದ ಮಾಣಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಬೊಲ್ಲಕಲ್ಲು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಢಿಕ್ಕಿ  ಹೊಡೆದ ರಭಸಕ್ಕೆ ಬಸ್ ನಲ್ಲಿದ್ದ ಡೀಸೆಲ್ ಟ್ಯಾಂಕ್ ನಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದರಿಂದ ಸಂಭವಿಸಬಹುದಾಗಿದ್ದ  ದೊಡ್ಡ ದುರಂತ ತಪ್ಪಿದಂತಾಗಿದೆ. ಇನ್ನು ಬಸ್ ನ ಚಾಲಕ ಸೇರಿದಂತೆ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ  ಎಂದು ತಿಳಿದುಬಂದಿದೆ.

ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿಯ ಹಳೇನೇರಂಕಿ ಗ್ರಾಮದ ಚೇತನ್‌ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ. ಇನ್ನು ವಿಚಾರ  ತಿಳಿಯುತ್ತಿದ್ದಂತೆಯೇ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬಸ್ ಗೆ ಹೊತ್ತಿದ್ದ ಬೆಂಕಿ ಸುತ್ತಮುತ್ತಲಿನ ಪ್ರದೇಶಕ್ಕೆ ಪಸರಿಸದಂತೆ ತಡೆದ ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ಗಂಟೆಗೂ ಅಧಿಕ ಕಾಲ ಸಂಚಾರ ವ್ಯತ್ಯಯಗೊಂಡಿತ್ತು. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು ತನಿಖೆ  ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com