ಛಂದ ಪುಸ್ತಕ ಹಸ್ತಪ್ರತಿ ಆಹ್ವಾನ

ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಛಂದ ಪುಸ್ತಕ ಹಸ್ತಪ್ರತಿ ಆಹ್ವಾನ
Updated on: 

ಕಳೆದ ಹನ್ನೊಂದು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.

ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಕಳುಹಿಸಬೇಕು.

ಆಯ್ಕೆಯಾದ ಕತೆಗಾರರಿಗೆ ಇಪ್ಪತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2015ರ ಡಿಸೆಂಬರ್ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವದಿಲ್ಲ. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.

ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ ಪುಸ್ತಕ, C/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟರಸ್ತೆ, ಬೆಂಗಳೂರು–560 076 (ದೂ. 98444 22782)

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30, 2015
ಹೆಚ್ಚಿನ ವಿವರಗಳಿಗೆ: vas123u@rocketmail.com

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com