ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬಳಿ ಬುಧವಾರ ಕೆಎಸ್ಆರ್ ಟಿಸಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಈ ಸಂಬಂಧ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರನ್ನು ಅವಿನಾಶ್‌ಚಿಂಚೋರೆ(30), ಶಿವಾನಂದಡಂಬಳ್(30), ಶಿವಾನಂದಮುತ್ತಗಿ(28) ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಹೆಸರು ತಿಳಿದು ಬಂದಿಲ್ಲ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಜ್ವಲ್ ಹಾಗೂ ಗೋವಿಂದ್ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್‌ಗೆ ಸೇರಿಸಲಾಗಿದೆ.
Advertisement