ರಾಘವೇಶ್ವರ ಶ್ರೀ ಪ್ರಕರಣದ ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಟಿಬಿ ಜಯಚಂದ್ರ

ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ...
ಟಿಬಿ ಜಯಚಂದ್ರ - ರಾಘವೇಶ್ವರ ಭಾರತಿ
ಟಿಬಿ ಜಯಚಂದ್ರ - ರಾಘವೇಶ್ವರ ಭಾರತಿ

ಬೆಂಗಳೂರು: ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರರವರು ಸ್ಪಷ್ಟನೇ ನೀಡಿದ್ದಾರೆ.

ಸರ್ಕಾರ ಕಾನೂನು ರೀತಿ ನಡೆದುಕೊಳ್ಳುತ್ತಿದ್ದು, ತನಿಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅಲ್ಲದೇ, ಈ ಪ್ರಕರಣದ ಸಂಬಂಧ ನಿನ್ನೆ ಕೇಂದ್ರ ಮಹಿಳಾ ಆಯೋಗದ ಅಧ್ಯಕ್ಷರು ತಮ್ಮನ್ನು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು. ಅವರಿಗೂ ಎಲ್ಲ ಮಾಹಿತಿಗಳನ್ನು ನೀಡಲಾಗಿದೆ ಎಂದು ಸಚಿವ ಜಯಚಂದ್ರ ತಿಳಿಸಿದ್ದಾರೆ.

ರಾಘವೇಶ್ವರ ಶ್ರೀಗಳಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿರುವುದರಿಂದ ಬಂಧಿಸಲು ಸಾಧ್ಯವಾಗಿಲ್ಲ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com