ಅರಸು ಕುರಿತ ನಾಟಕ ಪ್ರದರ್ಶನ: ವಿಶ್ವನಾಥ್

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮಶತಮಾನೋತ್ಸವದ ಅಂಗವಾಗಿ ವರ್ಷವಿಡಿ ರಾಜ್ಯಾದ್ಯಂತ ವಿವಿಧ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ದೇವರಾಜ ಅರಸು ಜನ್ಮಶತಮಾನೋತ್ಸವ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ..
ಮಾಜಿ ಸಂಸದ ಎಚ್ ವಿಶ್ವನಾಥ್ (ಸಂಗ್ರಹ ಚಿತ್ರ)
ಮಾಜಿ ಸಂಸದ ಎಚ್ ವಿಶ್ವನಾಥ್ (ಸಂಗ್ರಹ ಚಿತ್ರ)

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮಶತಮಾನೋತ್ಸವದ ಅಂಗವಾಗಿ ವರ್ಷವಿಡಿ ರಾಜ್ಯಾದ್ಯಂತ ವಿವಿಧ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ದೇವರಾಜ ಅರಸು ಜನ್ಮಶತಮಾನೋತ್ಸವ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.

ಬುಧವಾರ ದೇವರಾಜ ಅರಸು ಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಎಚ್. ವಿಶ್ವನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಮಹತ್ವದ  ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಅರಸು ಜನ್ಮಶತಮಾನೋತ್ಸದ ಅಂಗವಾಗಿ ರಾಜ್ಯಾದ್ಯಂತ ವರ್ಷವಿಡಿ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅದರ ಮುಖ್ಯ ಭಾಗವಾಗಿ ಹಿರಿಯ ರಂಗಕರ್ಮಿ ಬಸವಲಿಂಗಯ್ಯ ಅವರ ನೇತೃತ್ವದಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕಡೆ ಅರಸು ಕುರಿತ ನಾಟಕ ಪ್ರದರ್ಶನ ಮಾಡುವುದು ಹಾಗೂ ಅರಸು ಜೀವನ ಕುರಿತು ಸಾಕ್ಷ್ಯಚಿತ್ರ ನಿರ್ಮಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಂದ ರು.3 ಲಕ್ಷ ವೆಚ್ಚದಲ್ಲಿ ಅರಸು ಕುರಿತ ವಿಶೇಷ ಗೀತೆ ರಚನೆ ಮಾಡಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಜೊತೆಗೆ ಕರ್ನಾಟಕ  ರಾಜ್ಯೋತ್ಸವದ ದಿನ ಭುವನೇಶ್ವರಿ ಭಾವಚಿತ್ರದೊಂದಿಗೆ ಅರಸು ಭಾವಚಿತ್ರದ ಮೆರವಣಿಗೆ. ಆ ದಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅರಸು ಭಾವಚಿತ್ರದ ಮೆರವಣಿಗೆ ಮತ್ತು ಭಾವಚಿತ್ರಕ್ಕೆ  ಪೂಜೆ ಸಲ್ಲಿಸುವುದು. ದೇವರಾಜ ಅರಸು ಅವರ ಜೀವನಚರಿತ್ರೆಯನ್ನು ಗ್ರಂಥ ರೂಪದಲ್ಲಿ ಹೊರತಂದು ಅದನ್ನು ಹಿಂದಿ, ಇಂಗ್ಲಿಷ್, ತಮಿಳು, ತೆಲುಗು, ಮರಾಠಿ, ಮಲೆಯಾಳಿ ಉರ್ದು ಭಾಷೆಯನ್ನು ತರ್ಜುಮೆಗೊಳಿಸುವ ಬಗ್ಗೆ ನಿರ್ಧರಿಸಲಾಯಿತಿ.

ಹೇಳಿದವರೆ ಅಡ್ನಾಡಿ
ಪ್ರತಿಷ್ಠಿತ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು `ಅಡ್ನಾಡಿ' ಪ್ರಶಸ್ತಿ ಎಂದು ಟೀಕಿಸಿರುವ ಮಾಜಿ ಸಚಿವ ಸಿ.ಟಿ. ರವಿ ಅವರೇ ದೊಡ್ಡ ಅಡ್ನಾಡಿ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಚಾರವಾದಿ ಪ್ರೊ. ಕೆ. ಎಸ್. ಭಗವಾನ್ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿರುವುದಕ್ಕೆ ಅದೊಂದು ಅಡ್ನಾಡಿ ಪ್ರಶಸ್ತಿ ಎಂದು ಹೇಳಿರುವುದು  ಸ್ವತಃ ಅವರೇ ಅಜ್ಞಾನಿ ಅನ್ನುವುದನ್ನು ಖಚಿತಪಡಿಸಿದೆ. ಸರ್ಕಾರದಲ್ಲಿ ಸಚಿವ ಹುದ್ದೆ ನಿಭಾಯಿಸಿ ಅನುಭವ ಇರುವ ಸಿ.ಟಿ ರವಿ ಅವರಿಗೆ ಅಕಾಡೆಮಿಗಳ, ಘನತೆ ಮತ್ತು ಸ್ವಾಯತ್ತತೆ ಬಗ್ಗೆ ಗೊತ್ತಿಲ್ಲ  ಅಂತ ಕಾಣಿಸುತ್ತದೆ. ಈ ಹೇಳಿಕೆ ಪ್ರಶಸ್ತಿ ಮತ್ತು ಅಕಾಡೆಮಿಯ ಘನತೆಗೆ ಚ್ಯುತಿ ತಂದಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com