ಅ.1ರಿಂದ ಸರಕು ಲಾರಿಗಳ ಮುಷ್ಕರ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ಖಂಡಿಸಿ ಹಾಗೂ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.1ರಿಂದ ರಾಷ್ಟ್ರವ್ಯಾಪಿ ಸರಕು ಸಾಗಣೆ ವಾಹನಗಳು ಮುಷ್ಕರ ನಡೆಸಲಿವೆ ಎಂದು ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಆ್ಯಂಡ್ ಏಜೆಂಟ್ಸ್ ಅಸೋಸಿಯೇಷ ನ್' ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿರುವ ಅವರು, ``ಅವಧಿ ಮುಗಿದರೂ ಹಲವೆಡೆ ಟೋಲ್ ಸಂಗ್ರಹಿಸಲಾಗುತ್ತಿದೆ. ಹೀಗಾಗಿ ಲಾರಿ ಮಾಲಿಕರಿಗೆ ಆರ್ಥಿಕ ಹೊರೆ ಉಂಟಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧೆಡೆ ಟೋಲ್ ಸಂಗ್ರಹಿಸುವ ಮೂಲಕ ಹಗಲು ದರೋಡೆಗಿಳಿದಿವೆ.

ದೇಶಾದ್ಯಂತ ವಾರ್ಷಿಕ ಟೋಲ್ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು. ಐದು ವರ್ಷಗಳಲ್ಲಿ ಟೋಲ್ ಸಂಗ್ರಹ ಮುಕ್ತಾಯಗೊಳಿಸುವುದಾಗಿ ಹೇಳಿದ್ದ ಸರ್ಕಾರಗಳು 20 ರಿಂದ 25 ವರ್ಷಗಳವರೆಗೆ ಟೋಲ್ ಸಂಗ್ರಹಿಸುತ್ತಿವೆ,'' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com