ತಪ್ಪು ಮಾಹಿತಿ ತಪ್ಪಿಗೆ ತಪರಾಕಿ

ಬೆಂಗಳೂರು: ನರ್ಸಿಂಗ್ ಕೋರ್ಸ್ ಪ್ರವೇಶಾತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದ ನಗರದ ಕಾಲೇಜು ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಪ್ರಾಂಶುಪಾಲರನ್ನು ಜೈಲಿಗೆ ಕಳುಹಿಸಲು ಹಾಗೂ ವಿದ್ಯಾರ್ಥಿಗಳಿಗೆ ರು.1 ಲಕ್ಷ ದಂಡ ವಿಧಿಸಲು ಮುಂದಾದ ಘಟನೆ ಮಂಗಳವಾರ ನಡೆಯಿತು.
ಪ್ರಕರಣ ಕುರಿತು ಕಾಲೇಜು ಹಾಗೂ ವಿದ್ಯಾರ್ಥಿಗಳ ಪರ ವಕೀಲರು ಕ್ಷಮೆ ಕೋರಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ತೀರ್ಮಾನದಿಂದ ನ್ಯಾಯಮೂರ್ತಿಗಳು ಹಿಂದೆ ಸರಿದರು. 2014-2015ನೇ ಸಾಲಿನ ನರ್ಸಿಂಗ್ ಕೋರ್ಸ್ ಸೀಟು ಪ್ರವೇಶಾತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಾದ ಅಶ್ಮಿತಾ ತಪಾ ಚೆಟ್ರಿ ಮತ್ತು ಅಶ್ಮಿತಾ ಶ್ರೇಷ್ಠಾ ಎಂಬ ವಿದ್ಯಾರ್ಥಿಗಳ ದಾಖಲೆಗಳನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ (ಆರ್‍ಜಿಎಚ್‍ಎಸ್) ವಿದ್ಯಾರ್ಥಿಗಳಿಗೆ ಪ್ರವೇಶ ಅನುಮೋದನೆ ನೀಡಿಲ್ಲ ಎಂದು ವಿವಿ ವಿರುದ್ಧ ನಗರದ ಕೆಂಗೇರಿ ಬಳಿಯ ಎಸ್‍ಜೆಬಿ ಕಾಲೇಜು ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿತ್ತು.
ಇದೇ ವಾದ ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಕಾಲೇಜಿನ ಆರೋಪವನ್ನು ಅಲ್ಲಗೆಳೆದ ಆರ್‍ಜಿಎಚ್‍ಎಸ್ ಪರ ವಕೀಲ ಎನ್.ಕೆ. ರಮೇಶ್ ಅವರು, ನ್ಯಾಯಾಲಯಕ್ಕೆ ಕಾಲೇಜು ತಪ್ಪು ಮಾಹಿತಿ ನೀಡಿದೆ. ಇಬ್ಬರು ವಿದ್ಯಾರ್ಥಿಗಳ ದಾಖಲೆಗಳನ್ನು ಕಾಲೇಜು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಲೇ ಇಲ್ಲ ಎಂದು ಸ್ಪಷ್ಟಪಡಿಸಿ, ದಾಖಲೆಗಳನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿತು. ದಾಖಲೆ ಪರಿಶೀಲಿಸಿದ ನ್ಯಾ. ರವಿ ಮಳೀಮಠ್ ಅವರು, ಕಾಲೇಜು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ದಾಖಲೆ ಅಪ್ ಲೋಡ್ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ್ದೀರಿ. ಆ ಮೂಲಕ ಕೋರ್ಟ್ ದಿಕ್ಕು ತಪ್ಪಿಸುವ ಕಾರ್ಯ ಮಾಡಿದ್ದೀರಿ ಎಂದು ಕಾಲೇಜು ಹಾಗೂ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡರು. ಬುಧವಾರ ಪ್ರಾಂಶುಪಾಲರು ಮತ್ತು ಇಬ್ಬರು ವಿದ್ಯಾರ್ಥಿಗಳು ವಿಚಾರಣೆಗೆ ಹಾಜರಾಗಿ, ಮಾಡಿದ ತಪ್ಪಿಗೆ ಕ್ಷಮೆಯಾಚನಾ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


